ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UP Election 2022 - ಕೋಮು ದ್ವೇಷ ಹರಡುತ್ತಿರುವ ಬಿಜೆಪಿ: ಮಾಯಾವತಿ ಟೀಕೆ

Last Updated 4 ಫೆಬ್ರುವರಿ 2022, 4:10 IST
ಅಕ್ಷರ ಗಾತ್ರ

ಗಾಜಿಯಾಬಾದ್: ಬಿಜೆಪಿಯು ಜಾತಿ ರಾಜಕಾರಣ ಮಾಡುತ್ತಿದ್ದು, ಕೋಮು ದ್ವೇಷ ಹರಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಟೀಕಿಸಿದ್ದಾರೆ.

ಖಾದ್ಯ ತೈಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ತಡೆಯುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕಡೆಗಣಿಸಿದೆ. ಅಧಿಕಾರದಲ್ಲಿದ್ದಾಗ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಿಲ್ಲ ಎಂದು ಮಾಯಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮತ್ತೊಬ್ಬ ದಲಿತ ನಾಯಕ ಕಾನ್ಶಿ ರಾಮ್ ಅವರನ್ನೂ ಕಾಂಗ್ರೆಸ್ ಕಡೆಗಣಿಸಿದೆ ಎಂದು ಅವರು ದೂರಿದ್ದಾರೆ.

ಜನರು ಬಿಜೆಪಿ, ಎಸ್‌ಪಿ ಅಥವಾ ಕಾಂಗ್ರೆಸ್‌ಗೆ ಮತ ನೀಡಬಾರದು. ಬಿಎಸ್‌ಪಿ ಮಾತ್ರ ಅಚ್ಛೇ ದಿನ್ ತರಬಲ್ಲದು ಎಂದು ಮಾಯಾವತಿ ಹೇಳಿದ್ದಾರೆ.

ಎಸ್‌ಸಿ, ಎಸ್‌ಟಿ ಮತಗಳಿಗಾಗಿ ಕಾಂಗ್ರೆಸ್ ನಾಟಕ ಮಾಡುತ್ತಿದೆ ಎಂದಿರುವ ಅವರು, ಸಮಾಜವಾದಿ ಪಕ್ಷದ ಆಡಳಿತದ ಸಂದರ್ಭದಲ್ಲಿ ರಾಜ್ಯದಲ್ಲಿ ಗೂಂಡಾಗಿರಿ, ಮಾಫಿಯಾ ಹಾಗೂ ಸಮಾಜವಿರೋಧಿ ಚಟುವಟಿಕೆಗಳು ಹೆಚ್ಚಾಗಿದ್ದವು ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT