ಬುಧವಾರ, ಜನವರಿ 19, 2022
17 °C

ಉ.ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪ್ರಣಾಳಿಕೆ ಮಾರ್ಗಸೂಚಿ: ಪ್ರಿಯಾಂಕಾ

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾರ್ಗಸೂಚಿಯಾಗಿರಲಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಹೇಳಿದ್ದಾರೆ.

ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆ ತಯಾರಿಗಾಗಿ ವಿವಿಧ ಸಮಿತಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ನಂತರ ಪ್ರಿಯಾಂಕಾ ಗಾಂಧಿ ಹೇಳಿಕೆಯನ್ನು ಪಕ್ಷವು ಪ್ರಕಟಿಸಿದೆ.

ಇದನ್ನೂ ಓದಿ: 

ಯುವಕರು, ಮಹಿಳೆಯರು, ರೈತರು, ವ್ಯಾಪಾರಿಗಳು, ಸಮಾಜದ ಶೋಷಿತ ಸೇರಿದಂತೆ ಎಲ್ಲಾ ವರ್ಗಗಳ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಗಮನವನ್ನು ಹರಿಸಲಾಗುವುದು ಎಂದು ಪ್ರಕಟಣೆಯು ಹೇಳಿದೆ.

ಜನರ ಅಭಿಪ್ರಾಯಗಳ ಆಧಾರದಲ್ಲಿ ಸಿದ್ಧಪಡಿಸಲಾದ ಚುನಾವಣಾ ಪ್ರಣಾಳಿಕೆಗೆ ಅಂತಿಮ ರೂಪ ನೀಡುವ ಬಗ್ಗೆಯೂ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು