ಸೋಮವಾರ, ಸೆಪ್ಟೆಂಬರ್ 26, 2022
24 °C

ಉತ್ತರ ಪ್ರದೇಶ: ತ್ರಿವರ್ಣ ಧ್ವಜ ವಿತರಣೆ ಮಾಡಿದ ಕುಟುಂಬಕ್ಕೆ ಜೀವ ಬೆದರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಬಿಜ್ನೋರ್: ತ್ರಿವರ್ಣ ಧ್ವಜ ವಿತರಣೆ ಮಾಡಿದ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಬಳಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಶಶಿ ಎಂಬ ಮಹಿಳೆ ಮತ್ತು ಆಕೆಯ ಪತಿ ಅರುಣ್ ಎಂಬುವವರು ತ್ರಿವರ್ಣ ಧ್ವಜ ವಿತರಣೆ ಮಾಡಿದ್ದರು. ಅವರ ಮನೆ ಹೊರಗೆ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ ಪತ್ರ ಅಂಟಿಸಿದ್ದಾನೆ ಎಂದು ಹೆಚ್ಚುವರಿ ಎಸ್‌ಪಿ ಪ್ರವೀಣ್ ರಂಜನ್ ಸಿಂಗ್ ಹೇಳಿದ್ದಾರೆ.

ಬಿಜ್ನೋರ್‌ನ ಕಿರಾತ್‌ಪುರ್‌ನ ಬದ್ದುಪಡಾ ಪ್ರದೇಶದಲ್ಲಿ ಘಟನೆ ನಡೆದಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪ್ರವೀಣ್ ರಂಜನ್ ಸಿಂಗ್ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು