ಭಾನುವಾರ, ಮೇ 29, 2022
30 °C

ಚಂದ್ರಶೇಖರ್ ಆಜಾದ್ ಜೊತೆ ಸುದ್ದಿಗೋಷ್ಠಿ: ಉಮಾ ಕಿರಣ್ ಎಸ್‌ಪಿಯಿಂದ ಉಚ್ಚಾಟನೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಜಾಫರ್‌ನಗರ: ಉತ್ತರ ಪ್ರದೇಶದ ಮಾಜಿ ಸಚಿವೆ ಉಮಾ ಕಿರಣ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಸಮಾಜವಾದಿ ಪಕ್ಷವು ಆರು ವರ್ಷಗಳ ಕಾಲ ಉಚ್ಚಾಟಿಸಿದೆ.

ಉಮಾ ಕಿರಣ್ ಉಚ್ಚಾಟನೆಯನ್ನು ಎಸ್‌ಪಿ ಜಿಲ್ಲಾಧ್ಯಕ್ಷ ಪ್ರಮೋದ್ ತ್ಯಾಗಿ ಪ್ರಕಟಿಸಿದರು. ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಉಮಾ ಕಿರಣ್ ಅವರು ಪುರ್ಕಾಜಿ ಕ್ಷೇತ್ರದಿಂದ ಪಕ್ಷದ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದರು. ಅಲ್ಲಿ ಟಿಕೆಟ್ ನೀಡದ್ದರಿಂದ ಅಸಮಾಧಾನಗೊಂಡಿದ್ದರು.

ಚಂದ್ರಶೇಖರ್ ಆಜಾದ್ ನೇತೃತ್ವದ ಆಜಾದ್ ಸಮಾಜ ಪಕ್ಷದಿಂದ ಅವರಿಗೆ ಪುರ್ಕಾಜಿಯಿಂದಲೇ ಟಿಕೆಟ್ ನೀಡಲಾಗಿದ್ದು, ಚಂದ್ರಶೇಖರ್ ಆಜಾದ್ ಅವರ ಜೊತೆ ಪತ್ರಿಕಾಗೋಷ್ಠಿಯಲ್ಲಿಯೂ ಕಾಣಿಸಿಕೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು