ಮಂಗಳವಾರ, ಅಕ್ಟೋಬರ್ 26, 2021
26 °C

ಛತ್ತೀಸ್‌ಗಡ ಸಿಎಂ, ಪಂಜಾಬ್ ಉಪಮುಖ್ಯಮಂತ್ರಿ ಭೇಟಿ ತಡೆಗೆ ಉ. ಪ್ರದೇಶ ಸರ್ಕಾರ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ರೈತರ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರವನ್ನು ಗಮನಲ್ಲಿಟ್ಟುಕೊಂಡು ಲಖಿಂಪುರಕ್ಕೆ ಭೇಟಿ ನೀಡುವುದಾಗಿ ಘೋಷಿಸಿರುವ ಛತ್ತೀಸ್‌ಗಡದ ಮುಖ್ಯಮಂತ್ರಿ ಮತ್ತು ಪಂಜಾಬ್ ಉಪಮುಖ್ಯಮಂತ್ರಿಯ ಆಗಮನಕ್ಕೆ ಅನುಮತಿ ನೀಡಬೇಡಿ ಎಂದು ಉತ್ತರ ಪ್ರದೇಶ ಸರ್ಕಾರವು ಲಖನೌ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ವಿನಂತಿಸಿದೆ.

ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಭಾನುವಾರ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಸೇರಿ 8 ಮಂದಿ ಮೃತಪಟ್ಟಿದ್ದರು.

ಇದನ್ನೂ ಓದಿ: 

'ಲಖಿಂಪುರದಲ್ಲಿ ನಡೆದ ಘಟನೆ ಬಳಿಕ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿಗಳು ಅಲ್ಲಿ ನಿಷೇಧಾಜ್ಞೆ ವಿಧಿಸಿದ್ದಾರೆ. ಅಲ್ಲದೆ ಲಖನೌನ ಸಿಸಿಎಸ್ ವಿಮಾನ ನಿಲ್ದಾಣದಲ್ಲಿ ಛತ್ತೀಸ್‌ಗಡದ ಸಿಎಂ ಮತ್ತು ಪಂಜಾಬ್ ಉಪಮುಖ್ಯಮಂತ್ರಿ ಆಗಮನಕ್ಕೆ ಅನುಮತಿ ನೀಡಬಾರದು' ಎಂದು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ಅವರು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಅಕ್ಟೋಬರ್ 3 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಹಿಂಸಾಚಾರದ ವೇಳೆ 8 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಛತ್ತೀಸ್‌ಗಡ ಸಿಎಂ ಭೂಪೇಶ್‌ ಬಘೆಲ್‌ ಮತ್ತು ಪಂಜಾಬ್ ಉಪಮುಖ್ಯಮಂತ್ರಿ ಸುಖಜಿಂದರ್ ಎಸ್ ರಾಂಧವಾ ಅವರು ಸೋಮವಾರ ಲಖಿಂಪುರಕ್ಕೆ ಭೇಟಿ ನೀಡುವುದಾಗಿ ಘೋಷಿಸಿದ್ದರು.

ಇನ್ನಷ್ಟು...

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು