ಶನಿವಾರ, ಮೇ 21, 2022
22 °C
ಸೋಂಕು ನಿಯಂತ್ರಣಕ್ಕೆ ಸಿಎಂ ಯೋಗಿ ಸರ್ಕಾರದ ಕ್ರಮ

ಕೋವಿಡ್‌ ಭೀತಿ: ಉತ್ತರ ಪ್ರದೇಶದ 7 ಜಿಲ್ಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ, ಉತ್ತರ ಪ್ರದೇಶ ರಾಜಧಾನಿ ಲಖನೌ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ 6 ಜಿಲ್ಲೆಗಳಲ್ಲಿ ಮಾಸ್ಕ್ ಧರಿಸುವುದನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಕಡ್ಡಾಯಗೊಳಿಸಿದೆ. 

 ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿರುವ ಜಿಲ್ಲೆಗಳಲ್ಲಿ ಪರಿಣಾಮ ಬೀರಿದ್ದನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸರ್ಕಾರವು ಈ ಕ್ರಮ ಕೈಗೊಂಡಿದೆ. ಈ ಪ್ರಕಾರ ಗೌತಂ ಬುದ್ಧ ನಗರ, ಗಾಜಿಯಾಬಾದ್, ಹಪುರ್, ಮೀರಠ್, ಬುಲಂದ್‌ಶಹರ್, ಬಾಘ್‌ಪತ್ ಹಾಗೂ ರಾಜಧಾನಿ ಲಖನೌನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಕಡ್ಡಾಯವಾಗಿ  ಮಾಸ್ಕ್ ಧರಿಸಲೇಬೇಕು ಎಂದು ಸರ್ಕಾರದ ವಕ್ತಾರರೊಬ್ಬರು ತಿಳಿಸಿದ್ದಾರೆ. 

ಕಳೆದ 24 ಗಂಟೆಗಳ  ಅವಧಿಯಲ್ಲಿ ಗೌತಂ ಬುದ್ಧ ನಗರದಲ್ಲಿ 65, ಗಾಜಿಯಾಬಾದ್‌ನಲ್ಲಿ 20 ಹಾಗೂ ಲಖನೌನಲ್ಲಿ 10 ಮಂದಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಪರಿಸ್ಥಿತಿ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು