ಶನಿವಾರ, ಜೂನ್ 25, 2022
25 °C

ಹೊಸ ಮದರಾಸಗಳಿಗೆ ಅನುದಾನ ನೀಡದಿರಲು ಉತ್ತರಪ್ರದೇಶ ಸರ್ಕಾರ ನಿರ್ಧಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಯಾವುದೇ ಹೊಸ ಮದರಾಸಗಳಿಗೆ ಸರ್ಕಾರಿ ಅನುದಾನ ನೀಡದಿರಲು ಉತ್ತರ ಪ್ರದೇಶ ಸರ್ಕಾರದ ಸಚಿವ ಸಂಪುಟವು ನಿರ್ಧರಿಸಿದೆ. 

‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಮದರಾಸಗಳಿಗೆ ಅದನ್ನು ಮುಂದುವರಿಸಲಾಗುವುದು. ಆದರೆ, ಯಾವುದೇ ಹೊಸ ಫಲಾನುಭವಿಗಳ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗುವುದಿಲ್ಲ’ ಎಂದು ಉತ್ತರ ಪ್ರದೇಶದ ಅಲ್ಪಸಂಖ್ಯಾತರ ಕಲ್ಯಾಣ ರಾಜ್ಯ ಸಚಿವ ಡಾನಿಷ್‌ ಅಜಾದ್‌ ಅನ್ಸಾರಿ ಅವರು ಬುಧವಾರ ತಿಳಿಸಿದ್ದಾರೆ. 

‘ಪ್ರಸ್ತುತ ಉತ್ತರ ಪ್ರದೇಶದಲ್ಲಿ 560 ಮದರಾಸಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ. ಇದು ದೊಡ್ಡ ಸಂಖ್ಯೆಯಾಗಿದೆ. ಮದರಾಸಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಉದ್ದೇಶ. ಹಾಗಾಗಿ, ಯಾವುದೇ ಹೊಸ ಮದರಾಸಗಳಿಗೆ ಅನುದಾನ ನೀಡದಿರಲು ನಿರ್ಧರಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ. 

ಪ್ರಸ್ತುತ ಉತ್ತರ ಪ್ರದೇಶದಲ್ಲಿ 16,461 ಮದರಾಸಗಳಿವೆ. ಅದರಲ್ಲಿ 560 ಮದರಾಸಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು