ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ರಸ್ತೆ ಕಾಮಗಾರಿಗೆ ₹797 ಕೋಟಿ ಬಿಡುಗಡೆ

Last Updated 2 ಆಗಸ್ಟ್ 2022, 13:48 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ‘ಅಯೋಧ್ಯೆಯ ರಾಮ ಮಂದಿರಕ್ಕೆ ಸಂಚರಿಸುವ ರಸ್ತೆಗಳ ವಿಸ್ತರಣೆ ಮತ್ತು ನವೀಕರಣಕ್ಕಾಗಿ ಉತ್ತರ ಪ್ರದೇಶ ಸರ್ಕಾರ ₹797 ಕೋಟಿಯನ್ನು ಬಿಡುಗಡೆ ಮಾಡಿದೆ’ ಎಂದುಪ್ರವಾಸೋದ್ಯಮ ಸಚಿವ ಜೈವೀರ್ ಸಿಂಗ್ ಹೇಳಿದರು.

‘ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ದೊಡ್ಡ ಕಾರ್ಯಕ್ರಮಗಳ ಸಂದರ್ಭದಲ್ಲಿ ಜನಸಂದಣಿಯನ್ನು ತಡೆಗಟ್ಟಲು ಕಾಶಿ ವಿಶ್ವನಾಥ ಕಾರಿಡಾರ್ ಮಾದರಿಯಲ್ಲಿ ಸಾದತ್‌ಗಂಜ್‌ನಿಂದ ನಯಾಘಾಟ್‌ವರೆಗಿನ 12.940 ಕಿ.ಮೀ. ರಸ್ತೆಯನ್ನು ವಿಸ್ತರಿಸಲು ಸಂಪುಟ ಅನುಮೋದನೆ ನೀಡಿದೆ’ ಎಂದು ತಿಳಿಸಿದರು.

‘ಫೈಜಾಬಾದ್‌ನಿಂದ ಹನುಮಾನ್‌ಗಡಿ ಮತ್ತು ರಾಮಮಂದಿರಗಳವರೆಗಿನ ರಸ್ತೆಯನ್ನು ವಿಸ್ತರಿಸಲಾಗುವುದು. ವಿಸ್ತರಣೆ ಮಾರ್ಗದಲ್ಲಿನ ಅಂಗಡಿಗಳ ಮಾಲೀಕರಿಗೆ ಪುನರ್ವಸತಿ ಕಲ್ಪಿಸಲಾಗುವುದು. ಅಲ್ಲದೇ ಎರಡು ವರ್ಷಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಗಡುವು ನೀಡಲಾಗಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT