ಪತ್ನಿಯ ಪ್ರಿಯಕರನನ್ನು ಹತ್ಯೆ ಮಾಡಿ, ಮೃತದೇಹ ಕತ್ತರಿಸಿ ಕಸದ ತೊಟ್ಟಿಗೆ ಎಸೆದ!

ಲಖನೌ: ವ್ಯಕ್ತಿಯೊಬ್ಬ ತನ್ನ ಪತ್ನಿಯ ಪ್ರಿಯಕರನನ್ನು ಹತ್ಯೆ ಮಾಡಿದ್ದು, ಮೃತದೇಹವನ್ನು ಅರ್ಧ ಡಜನ್‌ಗಿಂತಲೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಸದ ತೊಟ್ಟಿಗೆ ಎಸೆದಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
ಆರೋಪಿಯನ್ನು ಮೀಲಾಲ್ ಪ್ರಜಾಪತಿ ಎಂದು ಗುರುತಿಸಲಾಗಿದೆ. ಪ್ರಜಾಪತಿಯ ಪತ್ನಿ ಗಾಜಿಯಾಬಾದ್ ನಿವಾಸಿ ಅಕ್ಷಯ್ ಜೊತೆ ಅಕ್ರಮ ಸಂಬಂಧ ಹೊಂದಿದ್ದರು. ಇದರಿಂದ ಕೋಪಗೊಂಡಿದ್ದ ಪ್ರಜಾಪತಿ, ಅಕ್ಷಯ್‌ನನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೀಲಾಲ್ ಮನೆಯಲ್ಲಿ ಇಲ್ಲದ ಸಮಯದಲ್ಲಿ ಪತ್ನಿಯೊಂದಿಗೆ ಸಲುಗೆ ಬೆಳೆಸಿದ್ದ ಅಕ್ಷಯ್ ಮನೆಗೆ ಬಂದು ಹೋಗುತ್ತಿದ್ದ. ಈ ವಿಚಾರ ತಿಳಿದಿದ್ದ ಮೀಲಾಲ್, ಪತ್ನಿಯ ಸಹಾಯದಿಂದ ಅಕ್ಷಯ್‌ಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದ. ಅಕ್ಷಯ್ ಮನೆಗೆ ಬಂದ ಕೂಡಲೇ ಆತನ ಮೇಲೆ ಹಲ್ಲೆ ನಡೆಸಿ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಬಳಿಕ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಮೃತದೇಹವನ್ನು ಕತ್ತರಿಸಿದ್ದು, ದೇಹದ ಭಾಗಗಳನ್ನು ನಗರದ ಕಸದ ತೊಟ್ಟಿಗೆ ಎಸೆದಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.
ಕಸದ ತೊಟ್ಟಿಯಲ್ಲಿ ದೇಹದ ಭಾಗಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತನಿಖೆಯ ನಂತರ ಮೀಲಾಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ದೀಕ್ಷಾ ಶರ್ಮಾ ಹೇಳಿದ್ದಾರೆ.
ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಲಕರ್ ಹತ್ಯೆ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೇ 18, 2022ರಂದು ಶ್ರದ್ಧಾ ವಾಲಕರ್ ಎಂಬ ಯುವತಿಯನ್ನು ಆಕೆಯ ಪ್ರಿಯಕರ ಉಸಿರುಗಟ್ಟಿಸಿ ಕೊಂದಿದ್ದ. ಬಳಿಕ ಆಕೆಯ ಮೃತದೇಹಗಳನ್ನು 35 ತುಂಡಾಗಳಾಗಿ ಕತ್ತರಿಸಿ ದಕ್ಷಿಣ ದೆಹಲಿಯ ಮಹ್ರೌಲಿಯಲ್ಲಿರುವ ತಮ್ಮ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿ ಇಟ್ಟಿದ್ದ. ಬಳಿಕ ಅದನ್ನು ತೆಗೆದು, ದೆಹಲಿ ಮತ್ತು ಗುರುಗ್ರಾಮದ ಹಲವೆಡೆ ಎಸೆದು ಬಂದಿದ್ದ. ನವೆಂಬರ್ 12ರಂದು ಪೊಲೀಸರು ಆತನನ್ನು ಬಂಧಿಸಿದ್ದರು.
ಓದಿ... ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ಗೆ ₹ 23 ಲಕ್ಷ ವಂಚನೆ ಮಾಡಿದವ ಮಂಗಳೂರಲ್ಲಿ ಬಂಧನ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.