ಶನಿವಾರ, ಸೆಪ್ಟೆಂಬರ್ 26, 2020
22 °C

ಉತ್ತರ ಪ್ರದೇಶ ಕಾನೂನು ಸಚಿವ ಬ್ರಿಜೇಶ್ ಪಾಠಕ್‌ಗೆ ಕೋವಿಡ್‌ ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಉತ್ತರ ಪ್ರದೇಶದ ಕಾನೂನು ಸಚಿವ ಬ್ರಿಜೇಶ್‌ ಪಾಠಕ್‌ ಅವರಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಬುಧವಾರ ಅವರೇ ಖಚಿತಪಡಿಸಿದ್ದಾರೆ.

‘ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಪರೀಕ್ಷೆ ಮಾಡಿಸಿಕೊಂಡಿದ್ದೆ. ಸೋಂಕು ತಗುಲಿರುವುದು ಪರೀಕ್ಷಾ ವರದಿಯಲ್ಲಿ ದೃಢಪಟ್ಟಿದೆ. ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ. ಜೊತೆಗೆ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಕ್ವಾರಂಟೈನ್‌ನಲ್ಲಿರಿ’ ಎಂದು ಪಾಠಕ್‌ ಅವರು ಟ್ವೀಟ್‌ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯು ಮಂಗಳವಾರದ ವೇಳೆಗೆ ಒಂದು ಲಕ್ಷದ ಗಡಿ ದಾಟಿತ್ತು. ಸಚಿವೆ ಕಮಲಾ ರಾಣಿ ವರುಣ್‌ ಅವರೂ ಕೋವಿಡ್‌ನಿಂದ ಮೃತಪಟ್ಟಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು