ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳು ಮಾತು ಕೇಳುತ್ತಿಲ್ಲ: ರಾಜೀನಾಮೆ ನೀಡಲು ಮುಂದಾದ ಉತ್ತರ ಪ್ರದೇಶ ಸಚಿವ

Last Updated 20 ಜುಲೈ 2022, 10:14 IST
ಅಕ್ಷರ ಗಾತ್ರ

ಲಖನೌ: ಇಲಾಖೆಯ ಅಧಿಕಾರಿಗಳು ತಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿರುವ ಉತ್ತರ ಪ್ರದೇಶದ ಸಚಿವ ದಿನೇಶ್ ಖಟಿಕ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಜಲಶಕ್ತಿ ಇಲಾಖೆಯ ಸಹಾಯಕ ಸಚಿವರಾಗಿರುವ ಖಟಿಕ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ದಿನೇಶ್ ಖಟಿಕ್ ಅವರದ್ದು ಎನ್ನಲಾದ ರಾಜೀನಾಮೆ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಅಧಿಕಾರಿಗಳು ಭ್ರಷ್ಟಾಚಾರ ಎಸಗುತ್ತಿದ್ದಾರೆ. ತಮ್ಮ ಮಾತು ಕೇಳುತ್ತಿಲ್ಲ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ. ಆದರೆ ಖಟಿಕ್ ಅವರು ಇದನ್ನು ನಿರಾಕರಿಸಿದ್ದು, ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿವರು ದೆಹಲಿಗೆ ತೆರಳಿದ್ದಾರೆ ಎಂದು ಮೀರತ್‌ನಲ್ಲಿರುವ ಅವರ ಆಪ್ತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT