ಮಂಗಳವಾರ, ಅಕ್ಟೋಬರ್ 26, 2021
21 °C
ಉತ್ತರಪ್ರದೇಶದಲ್ಲಿ ನಡೆದ ಘಟನೆ– ವಿಡಿಯೊ ವೈರಲ್

ಶಿಕ್ಷಕನ ಕಾರು ತೊಳೆದ ವಿದ್ಯಾರ್ಥಿ: ತನಿಖೆಗೆ ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬುಲಂದ್‌ಶಹರ್: ಇಲ್ಲಿನ ಸಿಕಂದರಾಬಾದ್‌ನ ಫರೀದ್‌ಪುರ ಗ್ರಾಮದ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಕರ ಕಾರನ್ನು ತೊಳೆಯುತ್ತಿರುವ ವಿಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವಿಡಿಯೊದಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರ ಕಾರನ್ನು ವಿದ್ಯಾರ್ಥಿಯು ಸ್ವಚ್ಛಗೊಳಿಸುತ್ತಿರುವ ದೃಶ್ಯಗಳಿವೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಶಿಕ್ಷಣಾಧಿಕಾರಿ ಅಖಂಡ್ ಪ್ರತಾಪ್ ಸಿಂಗ್ ಅವರು ತನಿಖೆ ನಡೆಸಲು ಆದೇಶಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು