ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UP Election: 54 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಎಸ್‌ಪಿ

Last Updated 5 ಫೆಬ್ರುವರಿ 2022, 10:13 IST
ಅಕ್ಷರ ಗಾತ್ರ

ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಎಸ್‌ಪಿ ಶನಿವಾರ 54 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಗೋರಖ್‌ಪುರ ನಗರ ಕ್ಷೇತ್ರದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಖ್ವಾಜಾ ಸಂಶುದ್ದೀನ್ ಅವರನ್ನು ಕಣಕ್ಕಿಳಿಸಿದೆ.

ಮಾಯಾವತಿ ನೇತೃತ್ವದ ಪಕ್ಷವು ಏಳು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.

ಬಹುಜನ ಸಮಾಜ ಪಕ್ಷವು ಸಂತೋಷ್ ತಿವಾರಿ ಅವರನ್ನು ಕುಶಿನಗರ ಜಿಲ್ಲೆಯ ಫಾಜಿಲ್‌ನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ತಿವಾರಿ ಅವರು ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿ ಮತ್ತು ಮಾಜಿ ಬಿಎಸ್‌ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ಎದುರಿಸಲಿದ್ದಾರೆ.

ಕತೇಹಾರಿಯಿಂದ ಪ್ರತೀಕ್ ಪಾಂಡೆ ಮತ್ತು ಅಕ್ಬರ್‌ಪುರದಿಂದ ಚಂದ್ರಪ್ರಕಾಶ್ ವರ್ಮಾ ಅವರಿಗೆ ಟಿಕೆಟ್ ನೀಡಿದೆ. ಎರಡೂ ಕ್ಷೇತ್ರಗಳು ಅಂಬೇಡ್ಕರ್‌ನಗರ ಜಿಲ್ಲೆಯ ವ್ಯಾಪ್ತಿಗೆ ಬರುತ್ತವೆ.

2017 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಬಿಎಸ್‌ಪಿಯ ಲಾಲ್ಜಿ ವರ್ಮಾ ಮತ್ತು ರಾಮ್ ಅಚಲ್ ರಾಜ್ಭರ್ ಕ್ರಮವಾಗಿ ಕತೇಹಾರಿ ಮತ್ತು ಅಕ್ದರ್‌ಪುರದಿಂದ ಗೆದ್ದಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ವರ್ಮಾ ಮತ್ತು ರಾಜ್‌ಭರ್ ಅಂಬೇಡ್ಕರ್‌ ನಗರದ 'ಜನದೇಶ್ ಮಹಾರಳ್ಳಿ'ಯಲ್ಲಿ ಎಸ್‌ಪಿಗೆ ಸೇರ್ಪಡೆಗೊಂಡಿದ್ದರು.

ಹಾಲಿ ಶಾಸಕ ಉಮಾಶಂಕರ್ ಸಿಂಗ್ ಅವರನ್ನು ಬಲ್ಲಿಯಾದ ರಾಸ್ರಾದಿಂದ ಕಣಕ್ಕಿಳಿಸಿದೆ.

ಗೋರಖ್‌ಪುರದ ಚಿಲ್ಲುಪರ್‌ನಿಂದ ರಾಜೇಂದ್ರ ಸಿಂಗ್‌ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಹೆಸರಿಸಿದೆ. ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದ ವಿನಯ್ ಶಂಕರ್ ತಿವಾರಿ ಅವರು ಪಕ್ಷವನ್ನು ತೊರೆದು ಎಸ್‌ಪಿಗೆ ಸೇರ್ಪಡೆಗೊಂಡಿದ್ದರು.

ಅಂಬೇಡ್ಕರ್‌ನಗರ, ಬಲರಾಂಪುರ, ಸಿದ್ಧಾರ್ಥನಗರ, ಬಸ್ತಿ, ಸಂತ ಕಬೀರ್ ನಗರ, ಮಹಾರಾಜ್‌ಗಂಜ್, ಗೋರಖ್‌ಪುರ, ಕುಶಿನಗರ, ಡಿಯೋರಿಯಾ ಮತ್ತು ಬಲ್ಲಿಯಾ ಜಿಲ್ಲೆಗಳವ 54 ವಿಧಾನಸಭಾ ಕ್ಷೇತ್ರಗಳಿಗೆ ಬಿಎಸ್‌ಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಮಾರ್ಚ್ 3 ರಂದು ರಾಜ್ಯ ವಿಧಾನಸಭಾ ಚುನಾವಣೆಯ ಆರನೇ ಹಂತದಲ್ಲಿ ಈ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT