ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ ಚುನಾವಣೆ: ಕೇಂದ್ರ ಸಚಿವೆ ಸೋದರಿಗೆ ಟಿಕೆಟ್ ನೀಡಿದ ಸಮಾಜವಾದಿ ಪಕ್ಷ

Last Updated 2 ಫೆಬ್ರುವರಿ 2022, 11:33 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಅವರ ಸಹೋದರಿ ಪಲ್ಲವಿ ಪಟೇಲ್ ಸೇರಿದಂತೆ ಮೂರು ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಸಮಾಜವಾದಿ ಪಕ್ಷ ಬುಧವಾರ ಪ್ರಕಟಿಸಿದೆ.

ಕೌಶಂಬಿಯ ಸಿರತು ಕ್ಷೇತ್ರದಿಂದ ಪಟೇಲ್ ಕಣಕ್ಕಿಳಿದಿದ್ದಾರೆ.

ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಪಲ್ಲವಿ ಪಟೇಲ್ ಸವಾಲೊಡ್ಡಲಿದ್ದು, ಇವರಲ್ಲದೆ, ಇತ್ತೀಚೆಗಷ್ಟೇ ಬಿಜೆಪಿ ಬಿಟ್ಟು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರಿಗೆ ಪಕ್ಷವು ಟಿಕೆಟ್ ನೀಡಿದೆ.

2017 ರ ಚುನಾವಣೆಯಲ್ಲಿ ಲಖನೌ ಉತ್ತರದ ಸರೋಜಿನಿ ನಗರದಿಂದ ಬಿಜೆಪಿಯ ರಾಜೇಶ್ವರ್ ಸಿಂಗ್ ವಿರುದ್ಧ ಸ್ಪರ್ಧಿಸಿದ್ದ ಅಭಿಷೇಕ್ ಮಿಶ್ರಾ ಅವರಿಗೆ ಪಕ್ಷವು ಟಿಕೆಟ್ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT