ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಪ್ರಕರಣ ದಾಖಲು

Last Updated 29 ನವೆಂಬರ್ 2020, 9:47 IST
ಅಕ್ಷರ ಗಾತ್ರ

ಲಖನೌ: ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿದ ನಂತರ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಈ ನೂತನ ಕಾಯ್ದೆಯಡಿ ಮೊದಲ ಪ್ರಕರಣ ದಾಖಲಿಸಲಾಗಿದೆ.

ಯುವತಿಯೊಬ್ಬರ ತಂದೆ ನೀಡಿದ ದೂರಿನನ್ವಯ ಜಿಲ್ಲೆಯ ದೇವರ್ನಿಯಾ ಪೊಲೀಸ್‌ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ದೇವರ್ನಿಯಾ ಠಾಣೆ ವ್ಯಾಪ್ತಿಯ ಶರೀಫ್‌ನಗರ ಗ್ರಾಮದ ಟೀಕಾರಾಮ್‌ ದೂರು ನೀಡಿದ್ದಾರೆ. ಅದೇ ಗ್ರಾಮದ ಉವೇಶ್‌ ಅಹ್ಮದ್‌ ಎಂಬ ವ್ಯಕ್ತಿ ಆಸೆ ತೋರಿಸಿ, ನನ್ನ ಮಗಳನ್ನು ಮತಾಂತರಗೊಳಿಸಲು ಯತ್ನಿಸುತ್ತಿದ್ದಾನೆ ಎಂದು ಟೀಕಾರಾಮ್‌ ಆರೋಪಿಸಿದ್ದು, ಪ್ರಕರಣ ದಾಖಲಿಸಲಾಗಿದೆ’ ಎಂದು ಗೃಹ ಇಲಾಖೆಯ ಹೆಚ್ಚುವರಿ ಕಾರ್ಯ ಕಾರ್ಯದರ್ಶಿ ಅವನೀಶ್ ಅವಸ್ಥಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಲವಂತದ ಅಥವಾ ಮೋಸದಿಂದ ಮತಾಂತರ ಮಾಡುವುದನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್‌ ಅವರು ಶನಿವಾರವಷ್ಟೇ ಅಂಕಿತ ಹಾಕಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT