ಶುಕ್ರವಾರ, ಅಕ್ಟೋಬರ್ 7, 2022
24 °C

ವಿಡಿಯೊ: ತರಗತಿಯಲ್ಲಿ ವಿದ್ಯಾರ್ಥಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ ಅಮಾನತು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯಿಂದ ಮಸಾಜ್ ಮಾಡಿಸಿಕೊಳ್ಳುವ ಮೂಲಕ ಪೋಷಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಶಿಕ್ಷಕಿಯೊಬ್ಬರು ವಿದ್ಯಾರ್ಥಿಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಶಿಕ್ಷಕಿಯ ವರ್ತನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ. 
 
ಹರ್ದೋಯಿಯ ಪೋಖಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕಿಯನ್ನು ಊರ್ಮಿಳಾ ಸಿಂಗ್ ಎಂದು ಗುರುತಿಸಲಾಗಿದೆ. ಶಿಕ್ಷಕಿ ಕುರ್ಚಿ ಮೇಲೆ ಕುಳಿತುಕೊಂಡು ವಿಶ್ರಾಂತಿ ಪಡೆಯುತ್ತಿದ್ದರೆ, ವಿದ್ಯಾರ್ಥಿಯೊಬ್ಬ ಪಕ್ಕದಲ್ಲಿ ನಿಂತುಕೊಂಡು ಮಸಾಜ್ ಮಾಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. 

ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಶಿಕ್ಷಕಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಓದಿ... ದೇಶದಾದ್ಯಂತ ಸುದ್ದಿಯಲ್ಲಿರುವ ನಟಿ ಅರ್ಪಿತಾ ಮುಖರ್ಜಿ ಯಾರು? ಆಕೆಯ ಹಿನ್ನೆಲೆ ಏನು? 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು