ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

Last Updated 3 ಏಪ್ರಿಲ್ 2021, 7:54 IST
ಅಕ್ಷರ ಗಾತ್ರ

ಶಹಜಹಾನ್‌ಪುರ (ಉತ್ತರ ಪ್ರದೇಶ): 25 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಡಿ ಮೂವರನ್ನು ಬಂಧಿಸಲಾಗಿದೆ.

‘ಮಾರ್ಚ್‌ 22ರಂದು ಮಿರ್ಜಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಲಾಗಿತ್ತು’ ಎಂದು ಪೊಲೀಸರು ಶನಿವಾರ ತಿಳಿಸಿದರು.

‘ಪತಿಯೊಂದಿಗೆ ದೂರವಾಣಿಯೊಂದಿಗೆ ಮಾತನಾಡಲು ಮಹಿಳೆ ತನ್ನ ಮನೆಯ ತಾರಸಿಗೆ ಹೋಗಿದ್ದಾಗ ಮೂವರು ಆರೋಪಿಗಳು ಆಕೆಯನ್ನು ಅಪಹರಿಸಿದ್ದರು’ ಎಂದು ಜಲಾಲಾಬಾದ್ ಪೊಲೀಸ್‌ ಅಧಿಕಾರಿ ಮಾಸಾ ಸಿಂಗ್ ಹೇಳಿದರು.

‘ಆರೋಪಿಗಳು ಸಂತ್ರಸ್ತೆಯ ಗ್ರಾಮಕ್ಕೆ ಸೇರಿದವರಾಗಿದ್ದಾರೆ. ಸಂತ್ರಸ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ. ಆದರೆ ಈ ನಡುವೆ ಮಹಿಳೆ ಅಲ್ಲಿಂದ ತಪ್ಪಿಸಿಕೊಂಡು, ತನ್ನ ಮನೆಗೆ ಬಂದಿದ್ದಾರೆ’ ಎಂದು ಅವರು ತಿಳಿಸಿದರು.

‘ಸಂತ್ರಸ್ತೆಯ ಪತಿ ದೆಹಲಿಯಲ್ಲಿ ಕೆಲಸ ಮಾಡುತ್ತಾರೆ. ಹೋಳಿ ಹಬ್ಬಕ್ಕೆಂದು ಪತಿ ಮನೆಗೆ ಮರಳಿದ್ದಾಗ ಸಂತ್ರಸ್ತೆ ನಡೆದ ಘಟನೆಯನ್ನು ಗಂಡನಿಗೆ ತಿಳಿಸಿದ್ದಾರೆ. ಈ ಸಂಬಂಧ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ. ಅದೇ ದಿನ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT