ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಸೌಲಭ್ಯ ಇಲ್ಲ

Last Updated 22 ಜೂನ್ 2021, 14:23 IST
ಅಕ್ಷರ ಗಾತ್ರ

ಲಖನೌ: ಎರಡಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯದಂತೆ ತಡೆಯುವ ನಿಟ್ಟಿನಲ್ಲಿ ಕಾನೂನು ರೂಪಿಸಲು ಉತ್ತರ ಪ್ರದೇಶ ಸರ್ಕಾರ ಚಿಂತನೆ ನಡೆಸುತ್ತಿದೆ.

ಈ ನಿಟ್ಟಿನಲ್ಲಿ ಉತ್ತರ ಪ್ರದೇಶದ ಕಾನೂನು ಆಯೋಗವು ಕರಡು ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದ್ದು, ಅದನ್ನು ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಬಲ್ಲ ಮೂಲಗಳು ಹೇಳಿವೆ.

‘ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯು ರಾಜ್ಯದ ಸಂಪನ್ಮೂಲಗಳ ಮೇಲೆ ಪ್ರಭಾವ ಬೀರಿದೆ. ಜನಸಂಖ್ಯೆ ಹೆಚ್ಚಳವು ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ಮಕ್ಕಳಿಗೆ ಶಾಲೆಗಳಲ್ಲಿ ಪ್ರವೇಶ ದೊರೆಯುತ್ತಿಲ್ಲ. ಆಸ್ಪತ್ರೆಗಳಲ್ಲೂ ಸಮಸ್ಯೆ ಉಂಟಾಗುತ್ತಿದೆ’ ಎಂದು ಕಾನೂನು ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಆದಿತ್ಯ ನಾಥ್ ಮಿತ್ತಲ್ ಅಭಿಪ್ರಾಯಪಟ್ಟಿದ್ದಾರೆ.

‘ಜಾರಿಗೆ ತರಲು ಯೋಜಿಸಲಾಗಿರುವ ಹೊಸ ಕಾನೂನು, ಯಾವುದೇ ನಿರ್ದಿಷ್ಟ ಧರ್ಮಕ್ಕೆ ಸಂಬಂಧಪಟ್ಟಿಲ್ಲ’ ಎಂದು ಸರ್ಕಾರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ವಿರೋಧಪಕ್ಷಗಳು ನಿರ್ದಿಷ್ಟ ಸಮುದಾಯವೊಂದನ್ನು ಗುರಿಯಾಗಿಸಿಕೊಂಡು ಬಿಜೆಪಿ ನೇತೃತ್ವದ ಸರ್ಕಾರವನ್ನು ದೂಷಿಸಿವೆ.

ಹೊಸ ಕಾನೂನು ರೂಪಿಸಲು ಚಿಂತನೆ ನಡೆಸಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT