ಸೋಮವಾರ, ಸೆಪ್ಟೆಂಬರ್ 20, 2021
21 °C

ಉತ್ತರ ಪ್ರದೇಶ: ಇಬ್ಬರಿಂದ ಮಹಿಳೆ ಅಪಹರಣ, ಅತ್ಯಾಚಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಾರಾಬಂಕಿ:  ಸಮೀಪದ ಗ್ರಾಮವೊಂದರಲ್ಲಿ ಇಬ್ಬರು, 18 ವರ್ಷದ ಮಹಿಳೆಯನ್ನು ಆಕೆಯ ಮನೆಯಿಂದಲೇ ಅಪಹರಿಸಿ ಅತ್ಯಾಚಾರ ಎಸಗಿರುವ ಕೃತ್ಯ ಶನಿವಾರ ನಡೆದಿದೆ.

ಸೋಮವಾರ ಈ ಕುರಿತು ಮಾಹಿತಿ ನೀಡಿರುವ ಪೊಲೀಸ್‌ ವರಿಷ್ಠಾಧಿಕಾರಿ ಅರವಿಂದ್ ಚತುರ್ವೇದಿ, ಕೃತ್ಯ ನಡೆದಾಗ ಸಂತ್ರಸ್ತೆಯ ಸಹೋದರ ಮತ್ತು ತಂದೆ ಮನೆಯಲ್ಲೇ ಇದ್ದರು. ಆದರೆ, ಏನಾಗುತ್ತಿದೆ ಎಂದು ಅವರಿಗೆ ಗ್ರಹಿಸಲಾಗಿಲ್ಲ ಎಂದರು.

ಇಬ್ಬರು ವ್ಯಕ್ತಿಗಳು ಮಹಿಳೆಯನ್ನು ಹಿಡಿದು ಅನುಚಿತವಾಗಿ ವರ್ತಿಸುತ್ತಿದ್ದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಾಲುವೆಯೊಂದರ ಸಮೀಪ ಬಿದ್ದಿದ್ದು ಭಾನುವಾರ ಪತ್ತೆಯಾಗಿದೆ.

ಮಹಿಳೆಯ ಹೇಳಿಕೆಯನ್ನು ಪಡೆದಿದ್ದು, ಅವರನ್ನು ವೈದ್ಯಕೀಯ ತಪಾಸಣೆ, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎ.ಎಸ್.ಪಿ ಮನೋಜ್ ಪಾಂಡೆ ಅವರು ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು