ಶನಿವಾರ, ಮೇ 28, 2022
21 °C

ಯುಪಿಯಲ್ಲಿ ಶಿಕ್ಷಕಿ ಮೇಲೆ ಅತ್ಯಾಚಾರ: ಮತಾಂತರಕ್ಕೆ ಒತ್ತಡ, ಮದುವೆಗೆ ಪ್ರಸ್ತಾಪ!

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ 28 ವರ್ಷದ ಶಾಲಾ ಶಿಕ್ಷಕಿ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯೊಬ್ಬ ಅದರ ವಿಡಿಯೊ ಚಿತ್ರೀಕರಣ ಮಾಡಿ, ಮತಾಂತರವಾಗಿ ತನ್ನನ್ನೇ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿ ಅಮೀರ್ ಸೇರಿದಂತೆ ಐವರ ವಿರುದ್ಧ ಉತ್ತರ ಪ್ರದೇಶದ ಕಾನೂನು ಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ದಾಖಲಾಗಿರುವ ಎಫ್ಐಆರ್‌ನಲ್ಲಿ ಆರೋಪಿಯ ತಾಯಿ, ಸಹೋದರಿ, ಸಹೋದರ ಮತ್ತು ಮತ್ತೊಬ್ಬ ಸಂಬಂಧಿಯ ಹೆಸರನ್ನು ಸೇರಿಸಲಾಗಿದೆ.

ಮೇ 4ರಂದು ಮಹಿಳೆ ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಅದೇ ಗ್ರಾಮದ ಅಮೀರ್, ಡ್ರಾಪ್ ಮಾಡುವುದಾಗಿ ಕರೆದೊಯ್ದಿದ್ದಾನೆ. ಬಳಿಕ, ಮೂಗಿಗೆ ಯಾವುದೋ ಔಷಧವನ್ನು ಇಟ್ಟು ಮೂಸುವಂತೆ ಮಾಡಿ, ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಅಮೀರ್ ಕುಟುಂಬ ಸದಸ್ಯರು ಮತಾತಂತರವಾಗಿ ಆತನನ್ನೇ ಮದುವೆಯಾಗುವಂತೆ ಒತ್ತಾಯಿಸಿದ್ದರು ಎಂದು ಮಹಿಳೆ ದೂರಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ.. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು