ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ| ವರದಕ್ಷಿಣೆಗಾಗಿ ಕತ್ತು ಹಿಸುಕಿ ಪತ್ನಿಯ ಹತ್ಯೆ

Last Updated 30 ಆಗಸ್ಟ್ 2021, 5:51 IST
ಅಕ್ಷರ ಗಾತ್ರ

ಮುಜಾಫರ್‌ನಗರ: ಉತ್ತರ ಪ್ರದೇಶದ ಶಾರ್ಮಿ ಜಿಲ್ಲೆಯಲ್ಲಿ ವರದಕ್ಷಿಣೆಗಾಗಿ 30 ವರ್ಷದ ಮಹಿಳೆಯೊಬ್ಬರನ್ನು ಆಕೆಯ ಗಂಡನೇ ಹತ್ಯೆಗೈದಿರುವ ಘಟನೆ ನಡೆದಿದೆ.

‘ಈ ಘಟನೆಯು ಜಿನ್‌ಜಹಾನಾ ಪೊಲೀಸ್‌ ಠಾಣಾ ವ್ಯಾಪ್ತಿಯ ಚೌಸಾನ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಯಾಸ್ಮಿನ್‌ ಮತ್ತು ಮೊಹಸಿನ್‌ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು’ ಎಂದು ಪೊಲೀಸರು ಹೇಳಿದರು.

‘ಸಂತ್ರಸ್ತೆಯಾಸ್ಮಿನ್‌ ಕುತ್ತಿಗೆಯಲ್ಲಿ ಗುರುತುಗಳಿವೆ. ಆಕೆಯನ್ನು ಕತ್ತು ಹಿಸುಕಿ ಕೊಂದಿರಬಹುದು. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿ ಜಿತೇಂದ್ರ ಕುಮಾರ್‌ ಮಾಹಿತಿ ನೀಡಿದರು.

‘ಯಾಸ್ಮಿನ್‌ನ ಗಂಡನೇ ಆಕೆಯ ಹತ್ಯೆಗೈದಿರುವುದಾಗಿ ಸಂತ್ರಸ್ತೆಯ ತಂದೆ ನೀಡಿರುವ ದೂರನ್ನು ಆಧರಿಸಿ ಮೊಹಸಿನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆತ ಪರಾರಿಯಾಗಿದ್ದಾನೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT