ಭಾನುವಾರ, ಜೂನ್ 13, 2021
29 °C

ಕೋವಿಡ್: ಹಾಸಿಗೆ ಲಭ್ಯತೆಯ ಮಾಹಿತಿ ಒದಗಿಸಲು ಆಸ್ಪತ್ರೆಗಳಿಗೆ ದೆಹಲಿ ಸರ್ಕಾರ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌–19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ರಾಜಧಾನಿಯಲ್ಲಿರುವ ಎಲ್ಲ ಆಸ್ಪತ್ರೆಗಳು ಮತ್ತು ಆರೈಕೆ ಕೇಂದ್ರಗಳು ಹಾಸಿಗೆ ಲಭ್ಯತೆಯ ಮಾಹಿತಿಯನ್ನು ‘ದೆಹಲಿ ಕೊರೊನಾ ಆ್ಯಪ್‌’ ಮತ್ತು ವೆಬ್‌ಸೈಟ್‌ನಲ್ಲಿ ಒದಗಿಸಬೇಕು ಎಂದು ದೆಹಲಿ ಸರ್ಕಾರ ಸೂಚಿಸಿದೆ.

ಹಲವು ಆಸ್ಪತ್ರೆಗಳು ನಿರಂತರವಾಗಿ ಮಾಹಿತಿಯನ್ನು ಒದಗಿಸುತ್ತಿಲ್ಲ. ಇದರಿಂದ, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಖಚಿತವಾದ ಮಾಹಿತಿ ದೊರೆಯದೆ ರೋಗಿಗಳು ಮತ್ತು ಅವರ ಸಂಬಂಧಿಕರು ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಹಾಸಿಗೆಗಳ ಸಂಪೂರ್ಣ ವಿವರ ನೀಡಲು ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕರು, ವೈದ್ಯಕೀಯ ಅಧೀಕ್ಷಕರು ಮತ್ತು ನಿರ್ದೇಶಕರು ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದೆ.

ದೆಹಲಿಯಲ್ಲಿ ಒಟ್ಟು 19,333 ಆಮ್ಲಜನಕ ಸೌಲಭ್ಯ ಹೊಂದಿರುವ ಬೆಡ್‌ಗಳಿವೆ. ಇವುಗಳಲ್ಲಿ ಶುಕ್ರವಾರ ಬೆಳಿಗ್ಗೆ 10.45ರ ವೇಳೆಗೆ 2,170 ಹಾಸಿಗೆಗಳು ಮಾತ್ರ ಖಾಲಿ ಉಳಿದಿದ್ದವು. 5566 ಐಸಿಯು ಹಾಸಿಗೆಗಳ ಪೈಕಿ 32 ಮಾತ್ರ ಲಭ್ಯ ಇದ್ದವು.

ಇದನ್ನೂ ಓದಿ... ರಾಜ್ಯಕ್ಕೆ 1,200 ಟನ್ ಆಮ್ಲಜನಕ; ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು