ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: ಒಂದೇ ದಿನ 524 ಹೊಸ ಕೋವಿಡ್ ಪ್ರಕರಣಗಳು ದೃಢ

Last Updated 12 ಮಾರ್ಚ್ 2023, 5:49 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ 113 ದಿನಗಳ ಬಳಿಕ ಒಂದೇ ದಿನ ಕೋವಿಡ್–19 ದೃಢಪಟ್ಟ 524 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಹೇಳಿದೆ.

ಮೂರು ತಿಂಗಳ ಬಳಿಕ ಕಳೆದ 24 ಗಂಟೆಗಳಲ್ಲಿ 524 ಹೊಸ ಪ್ರಕರಣಗಳು ವರದಿಯಾಗಿದ್ದು ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 3,618ಕ್ಕೆ ಏರಿಕೆಯಾಗಿದ್ದು, ಕೇರಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ದೇಶದಲ್ಲಿ ಇದುವರೆಗೆ ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 4,46,90,492ಕ್ಕೆ ತಲುಪಿದೆ. ಇಲ್ಲಿಯವರೆಗೂ ಕೋವಿಡ್‌ನಿಂದ ಮೃತಪಟ್ಟಿರುವವರ ಸಂಖ್ಯೆ 5,30,781ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.01 ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ 98.80 ರಷ್ಟು ಇದೆ ಎಂದು ಸಚಿವಾಲಯ ಹೇಳಿದೆ.

ಇಲಾಖೆಯ ಮಾಹಿತಿ ಪ್ರಕಾರ ಇದುವರೆಗೆ 220.64 ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT