ಗುರುವಾರ , ಜೂನ್ 30, 2022
22 °C

‘ನೀಟ್‌ಗೆ ಗರಿಷ್ಠ ವಯೋಮಿತಿ ಇಲ್ಲ’: ಎನ್‌ಎಂಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನೀಟ್‌ ಪರೀಕ್ಷೆ ಬರೆಯುವವರಿಗೆ ಗರಿಷ್ಠ ವಯೋಮಿತಿಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ತೆಗೆದುಹಾಕಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

2017ರಲ್ಲಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಪರೀಕ್ಷಾ ದಿನಾಂಕಕ್ಕೆ 25 ವರ್ಷ ಮತ್ತು ಮೀಸಲಾತಿಯಡಿ ಬರುವ ಅಭ್ಯರ್ಥಿಗಳಿಗೆ 30 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಿತ್ತು. ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ನೀಡಲಾಗಿತ್ತು ಎಂದು ಸುತ್ತೋಲೆಯಲ್ಲಿ ಹೇಳಿತ್ತು.

‘2021ರ ಅಕ್ಟೋಬರ್ 21ರಂದು ನಡೆದ 4ನೇ ಎನ್‌ಎಂಸಿ ಸಭೆಯಲ್ಲಿ ನೀಟ್‌–ಯುಜಿ ಪರೀಕ್ಷೆ ಬರೆಯಲು ಯಾವುದೇ ಗರಿಷ್ಠ ವಯೋಮಿತಿ ಇರಬಾರದೆಂದು ನಿರ್ಧರಿಸಲಾಗಿದೆ. ಹಾಗಾಗಿ ಈ ಮಾರ್ಪಾಡು ಮಾಡಲಾಗಿದೆ’ ಎಂದು ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು