ಭಾನುವಾರ, ಆಗಸ್ಟ್ 14, 2022
19 °C

ಏಳು ಟಿಡಿಪಿ ಶಾಸಕರು ಒಂದು ದಿನಕ್ಕೆ ಅಮಾನತು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಮರಾವತಿ: ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಗುರುವಾರ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆ ಯೋಜನೆ ಕುರಿತ ಚರ್ಚೆಯ ಸಂದರ್ಭದಲ್ಲಿ ಆಡಳಿತದಲ್ಲಿರುವ ವೈಎಸ್‌ಆರ್‌ ಕಾಂಗ್ರೆಸ್‌ ಹಾಗೂ ಟಿಡಿಪಿ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಏಳು ಟಿಡಿಪಿ ಶಾಸಕರನ್ನು ಸಭಾಧ್ಯಕ್ಷರು ಒಂದು ದಿನಕ್ಕೆ ಅಮಾನತು ಮಾಡಿದರು. 

ಚರ್ಚೆ ಸಂದರ್ಭದಲ್ಲಿ ತಮಗೂ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಟಿಡಿಪಿ ಶಾಸಕರು ಪ್ರತಿಭಟನೆ ನಡೆಸಿದ್ದರು. ಚಳಿಗಾಲದ ಅಧಿವೇಶನದಲ್ಲಿ ಸತತ ನಾಲ್ಕು ದಿನಗಳಿಂದ ವಿರೋಧ ಪಕ್ಷದ ಸದ್ಯರನ್ನು ಅಮಾನತು ಮಾಡಲಾಗುತ್ತಿದೆ.

ಏಳು ಶಾಸಕರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ, ಉಳಿದ ಟಿಡಿಪಿ ಶಾಸಕರೂ ಚರ್ಚೆಯನ್ನು ಬಹಿಷ್ಕರಿಸಿ ಹೊರನಡೆದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು