ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಎದುರಿಸಲು ಉತ್ತರ ಪ್ರದೇಶ ಸರ್ಕಾರದ ಪ್ರಯತ್ನ ಶ್ಲಾಘನೀಯ : ಪ್ರಧಾನಿ

ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ
Last Updated 15 ಜುಲೈ 2021, 8:48 IST
ಅಕ್ಷರ ಗಾತ್ರ

ವಾರಾಣಸಿ: ’ಕೋವಿಡ್‌–19’ ಸಾಂಕ್ರಾಮಿಕದ ಬಿಕ್ಕಟ್ಟನ್ನು ಎದುರಿಸಲು ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಪ್ರಯತ್ನಗಳು ಶ್ಲಾಘನೀಯ’ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.

ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಗುರುವಾರ ₹ 1,500 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ’ಉತ್ತರ ಪ್ರದೇಶ ಸರ್ಕಾರ ಕೋವಿಡ್‌–19 ಎರಡನೇ ಅಲೆಯನ್ನು ನಿಯಂತ್ರಿಸಿ, ಸೋಂಕು ಹರಡದಂತೆ ಕೈಗೊಂಡ ಕ್ರಮಗಳು ಅಭೂತಪೂರ್ವವಾಗಿವೆ’ ಎಂದು ಬಣ್ಣಿಸಿದರು.

’ಈ ಹಿಂದೆ ಆರೋಗ್ಯ ಕ್ಷೇತ್ರದಲ್ಲಿ ಸೌಲಭ್ಯಗಳ ಲಭ್ಯತೆ ಕಡಿಮೆಯಾಗಿದ್ದು ಮತ್ತು ಇಚ್ಛಾಶಕ್ತಿಯ ಕೊರತೆಯ ಕಾರಣದಿಂದಾಗಿ ಸಣ್ಣ ಪುಟ್ಟ ಸಮಸ್ಯೆಗಳು ಬೃಹದಾಕಾರವಾಗಿ ಕಾಣುತ್ತಿದ್ದವು’ ಎಂದು ಅವರು ನೆನಪಿಸಿದರು.

ಇದಕ್ಕೂ ಮುನ್ನ ವಾರಾಣಸಿಯಲ್ಲಿ ಪ್ರಧಾನಿಯವರು ₹744 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ₹839 ಕೋಟಿ ಮೊತ್ತ ಯೋಜನೆಗಳಿಗೆ ಶಂಕುಸ್ಥಾನೆ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT