ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್‌ ನಕಾರ

Last Updated 30 ಸೆಪ್ಟೆಂಬರ್ 2020, 8:06 IST
ಅಕ್ಷರ ಗಾತ್ರ

ನವದೆಹಲಿ: ಅಕ್ಟೋಬರ್‌ 4ರಂದು ನಿಗದಿಯಾಗಿರುವ ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಕೊರೊನಾ ಸೋಂಕಿನ ಕಾರಣ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಕೋರ್ಟ್‌ ಸೂಚನೆ ನೀಡಿದೆ.

ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಳ ಸಿದ್ಧತೆಗೆ ₹50 ಕೋಟಿ ವೆಚ್ಚ ಮಾಡಲಾಗಿದೆ ಎಂದು ಯುಪಿಎಸ್‌ಸಿ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿತ್ತು.

ಕೋವಿಡ್‌–19 ಕಾರಣದಿಂದಾಗಿ ಈ ಬಾರಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ನಾಗರಿಕ ಸೇವೆಗಳ ಆಕಾಂಕ್ಷಿಗಳಲ್ಲಿ ಕೆಲವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ವರ್ಷದ ಯುಪಿಎಸ್‌ಸಿ ಪ್ರಿಲಿಮ್ಸ್‌ ಪರೀಕ್ಷೆಗೆ ಸುಮಾರು 6 ಲಕ್ಷ ಅಭ್ಯರ್ಥಿಗಳು ಹಾಜರಾಗುವ ಸಾಧ್ಯತೆ ಇದೆ. ದೇಶದ 72 ನಗರಗಳಲ್ಲಿ ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಮೇ 31ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಕೋವಿಡ್‌ ಕಾರಣಗಳಿಂದಾಗಿ ಮುಂದೂಡಲಾಗಿತ್ತು. ಜೂನ್‌ 5ರಂದು ಯುಪಿಎಸ್‌ಸಿ ಪರಿಷ್ಕೃತ ಪರೀಕ್ಷಾ ಪಟ್ಟಿ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT