ಶುಕ್ರವಾರ, ಅಕ್ಟೋಬರ್ 7, 2022
28 °C

ಯುಪಿಎಸ್‌ಸಿ: ಸರ್ಕಾರಿ ಉದ್ಯೋಗಕ್ಕೆ ಕೇವಲ 4,119 ಅಭ್ಯರ್ಥಿಗಳ ಶಿಫಾರಸು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) 2021–22ನೇ ಸಾಲಿನಲ್ಲಿ ವಿವಿಧ ಸರ್ಕಾರಿ ಉದ್ಯೋಗಗಳಿಗೆ ಕೇವಲ 4,119 ಅಭ್ಯರ್ಥಿಗಳನ್ನು ಶಿಫಾರಸು ಮಾಡಿದೆ. ಕಳೆದ ಹತ್ತು ವರ್ಷಗಳಲ್ಲಿ ಅತಿ ಕಡಿಮೆ ಸಂಖ್ಯೆ ಎಂದು ಸಿಬ್ಬಂದಿ ಸಚಿವಾಲಯ ಬುಧವಾರ ಅಂಕಿ ಅಂಶವನ್ನು ಲೋಕಸಭೆಗೆ ತಿಳಿಸಿದೆ.

‘ಪ್ರತಿ ವರ್ಷ ಕೇಂದ್ರ ಲೋಕಸೇವಾ ಆಯೋಗ ಪರೀಕ್ಷೆಗಳನ್ನು ವೇಳಾಪಟ್ಟಿ ಪ್ರಕಾರ ನಡೆಸುತ್ತದೆ’ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಲಿಖಿತ ಉತ್ತರ ನೀಡಿದ್ದಾರೆ.

2021–22ರಲ್ಲಿ 5,153 ಹುದ್ದೆಗಳಿಗೆ 4,119 ಅಭ್ಯರ್ಥಿ ಹಾಗೂ 2020–21ರಲ್ಲಿ 4,214, 2019–20ರಲ್ಲಿ 5,320 ಅಭ್ಯರ್ಥಿಗಳನ್ನು ಶಿಫಾರಸು ಮಾಡಲಾಗಿದೆ. ಅದೇ ರೀತಿ 2018ರಲ್ಲಿ 5,207 ಹುದ್ದೆಗಳಿಗೆ 4,399 ಅಭ್ಯರ್ಥಿಗಳನ್ನು ಶಿಫಾರಸು ಮಾಡಲಾಗಿತ್ತು.

ಅಂಕಿ ಅಂಶ ಪ್ರಕಾರ 2017–18ರಲ್ಲಿ 6,294, 2016–17ರಲ್ಲಿ 5,735, 2015–16ರಲ್ಲಿ 6,866, 2014–15ರಲ್ಲಿ 8,272, 2013–14ರಲ್ಲಿ 8,852, 2012–13ರಲ್ಲಿ 5,705 ಅಭ್ಯರ್ಥಿಗಳನ್ನು ಶಿಫಾರಸು ಮಾಡಲಾಗಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು