ಶನಿವಾರ, ಅಕ್ಟೋಬರ್ 23, 2021
24 °C

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಒಬ್ಬ ಉಗ್ರನ ಹತ್ಯೆ, ಮತ್ತೊಬ್ಬ ಶರಣು

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

PTI

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿದಿರುವ ಭಾರತೀಯ ಸೇನೆ ಒಬ್ಬನನ್ನು ಹತ್ಯೆ ಮಾಡಿದೆ. ಶರಣಾದ ಮತ್ತೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಶ್ರೀನಗರದ ರಾಜೌರಿಕದಲ್‌ ಪ್ರದೇಶದಲ್ಲಿ ಉಗ್ರರ ಅಡಗುತಾಣ ನಿರ್ಮಿಸಲು ಲಷ್ಕರ್‌ ಎತೈಬಾ ಉಗ್ರ ಸಂಘಟನೆಯ ಕಮಾಂಡರ್‌ ರಿಯಾಜ್‌ ಸತರ್‌ಗುಂಡ್‌ನ ಆದೇಶ ಮಾಡಿದ್ದಾಗಿ ವಿಚಾರಣೆ ವೇಳೆ ಉಗ್ರ ಬಾಯ್ಬಿಟ್ಟಿದ್ದಾನೆ. ಪೊಲೀಸರಿಗೆ ಅಡಗುತಾಣವನ್ನು ತೋರಿಸಿಕೊಟ್ಟಿದ್ದಾನೆ.

ಆದರೆ ಪೊಲೀಸರು ಭೇಟಿ ನೀಡಿದಾಗ ಅಡಗುತಾಣ ಖಾಲಿಯಿರುವುದು ಕಂಡುಬಂದಿದೆ. ಕಟ್ಟಡಕ್ಕೆ ಸಂಬಂಧಿಸಿದ ಮಾಲೀಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಉರಿ ಸೆಕ್ಟರ್‌ನಲ್ಲಿ ಮಂಗಳವಾರ ಬೆಳಗ್ಗೆ ಈ ಕಾರ್ಯಾಚರಣೆ ನಡೆದಿದೆ. ಪುಲ್ವಾಮ ಪೊಲೀಸರು ಮತ್ತು 50 ರಾಷ್ಟ್ರೀಯ ರೈಫಲ್ಸ್‌ ಸಿಬ್ಬಂದಿ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ಜೋನ್‌ ಪೊಲೀಸ್‌ ಟ್ವೀಟ್‌ನಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು