ಮಂಗಳವಾರ, ಆಗಸ್ಟ್ 16, 2022
21 °C

ಊರ್ಮಿಳಾ ಮಾತೋಂಡ್ಕರ್‌ ಶಿವಸೇನಾಗೆ ಸೇರ್ಪಡೆ

ಪಿಟಿಐ Updated:

ಅಕ್ಷರ ಗಾತ್ರ : | |

ಊರ್ಮಿಳಾ ಮಾತೋಂಡ್ಕರ್‌

ಮುಂಬೈ: ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡ್ಕರ್‌ ಅವರು ಮಂಗಳವಾರ ಶಿವಸೇನಾಗೆ ಸೇರ್ಪಡೆಯಾಗಿದ್ದಾರೆ.

2019ರಲ್ಲಿ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‌ನಿಂದ ಉತ್ತರ ಮುಂಬೈ ಕ್ಷೇತ್ರದಿಂದ ಊರ್ಮಿಳಾ ಅವರು ಸ್ಪರ್ಧಿಸಿದ್ದರು. ಆದರೆ ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದರು. ಕಾಂಗ್ರೆಸ್‌ಗೆ ಸೇರಿದ ಐದು ತಿಂಗಳ ಬಳಿಕ ಊರ್ಮಿಳಾ ಅವರು ಪಕ್ಷ ತೊರೆದು, ಶಿವಸೇನಾಗೆ ಸೇರ್ಪಡೆಯಾಗಿದ್ದಾರೆ.

ಬಾಂದ್ರಾದಲ್ಲಿರುವ ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರ ನಿವಾಸದಲ್ಲಿ ಊರ್ಮಿಳಾ ಅವರು ಶಿವಸೇನಾಗೆ ಸೇರಿದ್ದಾರೆ.

ಊರ್ಮಿಳಾ ಅವರನ್ನು ರಾಜ್ಯಪಾಲರ ಕೋಟಾದಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವಂತೆ ಇತ್ತೀಚೆಗೆ ಶಿವಸೇನಾ ಶಿಫಾರಸು ಮಾಡಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು