ವಾಷಿಂಗ್ಟನ್: 2008ರ ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣದ ಆರೋಪಿ, ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಸಂಬಂಧಿಸಿದ ತೀರ್ಪನ್ನು ಅಮೆರಿಕದ ಕೋರ್ಟ್ ಕಾಯ್ದಿರಿಸಿ ಒಂದು ವರ್ಷ ಮೇಲಾದರೂ ಪ್ರಕಟಿಸಿಲ್ಲ.
ಕ್ಯಾಲಿಫೋರ್ನಿಯಾ ಸೆಂಟ್ರಲ್ ಡಿಸ್ಟ್ರಿಕ್ಟ್ ಕೋರ್ಟ್‌ನ ನ್ಯಾಯಾಧೀಶರಾದ ಜಾಕ್ವೆಲಿನ್ ಚೂಲ್ಜಿಯನ್ ಅವರು 2021ರ ಜೂನ್‌ನಲ್ಲಿ ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದರು. ರಾಣಾ ಹಸ್ತಾಂತರಕ್ಕೆ ಸಂಬಂಧಿಸಿದ ದಾಖಲೆಗಳನ್ನು 2021ರ ಜುಲೈನಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಮೆರಿಕ ಸರ್ಕಾರ ಕೂಡ ನ್ಯಾಯಾಲಯಕ್ಕೆ ಮನವಿಯನ್ನು ಸಲ್ಲಿಸಿದೆ. ಈ ಎಲ್ಲ ಪ್ರಕ್ರಿಯೆಗಳು ಮುಗಿದು ಒಂದು ವರ್ಷ ಮೇಲಾದರೂ ನ್ಯಾಯಾಲಯವು ತನ್ನ ತೀರ್ಪನ್ನು ಪ್ರಕಟಿಸಿಲ್ಲ.
2008ರ ನವೆಂಬರ್ 26ರಂದು ಮುಂಬೈ ಮೇಲೆ ಲಷ್ಕರ್–ಎ–ತಯಬಾ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 6 ಅಮೆರಿಕನ್ನರು ಸೇರಿ 166 ಮಂದಿ ಮೃತಪಟ್ಟಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.