ಗುರುವಾರ , ಡಿಸೆಂಬರ್ 3, 2020
20 °C

ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಿನಲ್ಲಿ ವಿಶೇಷ ಪ್ರಾರ್ಥನೆ

ಏಜೆನ್ಶೀಸ್ Updated:

ಅಕ್ಷರ ಗಾತ್ರ : | |

ಚೆನ್ನೈ: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನಗೊಂಡಿರುವ, ಭಾರತದ ನಂಟಿರುವ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರ ಗೆಲುವಿಗಾಗಿ ತಮಿಳುನಾಡಿನಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು.

ಮಂಗಳವಾರ ಅಮೆರಿಕದಲ್ಲಿ ಚುನಾವಣೆ ಆರಂಭಗೊಂಡ ಹಿನ್ನೆಲೆಯಲ್ಲಿ ಕಮಲಾ ಪ್ಯಾರಿಸ್‌ ಅವರ ಪೂರ್ವಜರು ವಾಸವಿದ್ದ ತುಳಸಿತೀರ್ಥಪುರಂ ಹಳ್ಳಿಯಲ್ಲಿ ವಿಶೇಷ ಪೂಜೆ ಮಾಡಿ, ಇಡ್ಲಿ, ಸಾಂಬಾರ್‌ ವಿತರಿಸಲಾಯಿತು.

ಕಮಲಾ ಹ್ಯಾರಿಸ್‌ ಈ ಚುನಾವಣೆಯಲ್ಲಿ ಗೆಲ್ಲಬೇಕು ಎಂದು ನಾವು ಬಯಸುತ್ತೇವೆ. ಅವರಿಗಾಗಿ ವಿಶೇಷ ಪೂಜೆ ಮಾಡಲಾಗುತ್ತಿದೆ ಎಂದು ಇಲ್ಲಿನ ಸ್ಥಳೀಯೊಬ್ಬರು ತಿಳಿಸಿದ್ದಾರೆ. ಇದೇ ಗ್ರಾಮದಲ್ಲಿ ಕಮಲಾ ಹ್ಯಾರಿಸ್‌ಗೆ ಶುಭ ಕೋರಿ ಪೋಸ್ಟರ್ ಗಳನ್ನು ಹಾಕಲಾಗಿದೆ.

ಕಮಲಾ ಹ್ಯಾರಿಸ್ ತಾಯಿ ಶ್ಯಾಮಲಾ ಗೋಪಾಲನ್ ಅವರು ಅಧ್ಯಯನಕ್ಕಾಗಿ ಭಾರತದಿಂದ ಅಮೆರಿಕಕ್ಕೆ ತೆರಳಿದ್ದರು. ನಂತರ ಅವರು ಜಮೈಕಾ ಮೂಲದ ಹ್ಯಾರಿಸ್‌ ಎಂಬವರನ್ನು ಮದುವೆಯಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು