ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ತ್ವರಿತ ವೀಸಾ ನೀಡಲು ವಿಶೇಷ ಕ್ರಮಗಳಿಗೆ ಚಾಲನೆ

Last Updated 22 ಜನವರಿ 2023, 19:20 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ವೀಸಾ ನೀಡುವ ಪ್ರಕ್ರಿಯೆಗೆ ಚುರುಕು ನೀಡುವ ಸಂಬಂಧ ಅಮೆರಿಕ ಕೆಲ ನೂತನ ಕ್ರಮಗಳಿಗೆ ಚಾಲನೆ ನೀಡಿದೆ.

‘ವೀಸಾ ಕೋರಿ ಮೊದಲ ಬಾರಿಗೆ ಅರ್ಜಿ ಸಲ್ಲಿಸುವವರಿಗೆ ವಿಶೇಷ ಸಂದರ್ಶನ ಆಯೋಜನೆ, ಕಾನ್ಸುಲೇಟ್‌ ಕಚೇರಿಗಳಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಜ.21ರಂದು ಈ ನೂತನ ಕ್ರಮಗಳಿಗೆ ಚಾಲನೆ ನೀಡಲಾಗಿದೆ’ ಎಂದು ಅಮೆರಿಕ ರಾಯಭಾರ ಕಚೇರಿ ಭಾನುವಾರ ತಿಳಿಸಿದೆ.

ಈ ಕ್ರಮದ ಭಾಗವಾಗಿ, ದೆಹಲಿಯಲ್ಲಿರುವ ರಾಯಭಾರ ಕಚೇರಿ, ಮುಂಬೈ, ಚೆನ್ನೈ, ಕೋಲ್ಕತ್ತ ಹಾಗೂ ಹೈದರಾಬಾದ್‌ನಲ್ಲಿರುವ ಕಾನ್ಸುಲೇಟ್‌ ಕಚೇರಿಗಳಲ್ಲಿ ‘ಶನಿವಾರ ವಿಶೇಷ ಸಂದರ್ಶನ’ ಹೆಸರಿನ ಕಾರ್ಯಕ್ರಮದಡಿ ಜ.21ರಂದು ವೀಸಾ ನೀಡಲು ಸಂದರ್ಶನ ನಡೆಸಲಾಯಿತು ಎಂದೂ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT