ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆಗಳ ಮೇಲೆ ಅಮೆರಿಕ ನಿಗಾ: ಬ್ಲಿಂಕನ್

Last Updated 12 ಏಪ್ರಿಲ್ 2022, 6:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಭಾರತದಲ್ಲಿ ಸರ್ಕಾರಗಳು, ಪೊಲೀಸರು ಮತ್ತು ಜೈಲು ಅಧಿಕಾರಿಗಳಿಂದ ಆಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯಂಥ ಆತಂಕಕಾರಿ ಬೆಳವಣಿಗೆಗಳನ್ನು ನಾವು ಗಮನಿಸುತ್ಲಿದ್ದೇವೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಹೇಳಿದ್ದಾರೆ.

ಭಾರತ ಮತ್ತು ಅಮೆರಿಕದ 2+2 ಸಚಿವರ (ಉಭಯ ರಾಷ್ಟ್ರಗಳರಕ್ಷಣಾಮತ್ತು ವಿದೇಶಾಂಗ ಸಚಿವರ) ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬ್ಲಿಂಕನ್‌ ಈ ಮಾತುಗಳನ್ನು ಆಡಿದರು. ಈ ಸಭೆಯಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಭಾರತದ ವಿದೇಶಾಂಗ ಸಚಿವ ಜೈಶಂಕರ್‌, ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್‌ ಆಸ್ಟಿನ್‌ ಇದ್ದರು.

‘ಭಾರತದಲ್ಲಿ ಕೆಲವು ಸರ್ಕಾರಗಳು, ಪೊಲೀಸರು ಮತ್ತು ಜೈಲು ಅಧಿಕಾರಿಗಳಿಂದ ಆಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಲ್ಲಿನ ಇತ್ತೀಚಿನ ಕೆಲವು ಆತಂಕಕಾರಿ ಬೆಳವಣಿಗೆಗಳನ್ನು ನಾವು ಗಮನಿಸುತ್ತಿದ್ದೇವೆ‘ ಎಂದು ಬ್ಲಿಂಕೆನ್ ತಮ್ಮ ಭಾಷಣದ ಆರಂಭದಲ್ಲೇ ಹೇಳಿದರು.ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಹೆಚ್ಚು ವಿವರಣೆ ನೀಡಲಿಲ್ಲ.

‘ಮಾನವ ಹಕ್ಕುಗಳನ್ನು ರಕ್ಷಿಸುವಂತಹ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಾವು ಬದ್ಧವಾಗಿರುತ್ತೇವೆ. ಇದೇ ಆಧಾರದಲ್ಲೇ ಭಾರತದೊಂದಿಗೆ ನಾವು ನಿರಂತರವಾಗಿ ವ್ಯವಹರಿಸುತ್ತೇವೆ‘ ಎಂದು ಬ್ಲಿಂಕೆನ್ ಹೇಳಿದರು.

ಭಾರತದಲ್ಲಿ ನಾಗರಿಕ ಹಕ್ಕುಗಳು ಹರಣವಾಗಿವೆ ಎಂಬ ವಿದೇಶಿ ಸರ್ಕಾರಗಳು ಮತ್ತು ಮಾನವ ಹಕ್ಕು ಸಂಘಟನೆಗಳ ಟೀಕೆಗಳನ್ನು ಕೇಂದ್ರ ಸರ್ಕಾರ ಈ ಹಿಂದೆ ತಿರಸ್ಕರಿಸಿತ್ತು.

ಎಲ್ಲರ ಹಕ್ಕುಗಳನ್ನು ಕಾಪಾಡಲು ಪ್ರಜಾಸತ್ತಾತ್ಮಕ ಕಾರ್ಯವಿಧಾನ ಮತ್ತು ದೃಢ ಸಂಸ್ಥೆಗಳನ್ನು ನಾವು ಹೊಂದಿದ್ದೇವೆ ಎಂದು ಭಾರತ ತಿರುಗೇಟು ನೀಡಿತ್ತು.

ಮಾನವ ಹಕ್ಕುಗಳ ರಕ್ಷಣೆಯನ್ನು ಖಾತ್ರಿಪಡಿಸಲು ಭಾರತೀಯ ಸಂವಿಧಾನವು ವಿವಿಧ ಶಾಸನಗಳ ಅಡಿಯಲ್ಲಿ ಸಾಕಷ್ಟು ಸುರಕ್ಷತೆಗಳನ್ನು ಕೊಡಮಾಡುತ್ತದೆ ಎಂದು ಸರ್ಕಾರ ಒತ್ತಿಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT