ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣಕಾಸು ಸಚಿವೆ ನಿರ್ಮಲಾ ಜತೆ ಅಮೆರಿಕ ಖಜಾನೆ ಕಾರ್ಯದರ್ಶಿ ಮಾತುಕತೆ

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತದ ಪಾತ್ರ ಶ್ಲಾಘನೀಯ: ಎಲೆನ್‌
Last Updated 16 ಮಾರ್ಚ್ 2021, 5:36 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದ ಖಜಾನೆ ಕಾರ್ಯದರ್ಶಿ ಜಾನೆಟ್ ಎಲೆನ್‌ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ದೂರವಾಣಿ ಕರೆ ಮಾಡಿ ಮಾತನಾಡಿದ ಎಲೆನ್‌, ‘ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತದ ಪಾತ್ರ ಶ್ಲಾಘನೀಯ ಎಂದು ಹೇಳಿದರು. ಅಲ್ಲದೆ ಅವರು ಜಾಗತಿಕ ಆರ್ಥಿಕ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದರು.

ಜನವರಿಯಲ್ಲಿ ಅಮೆರಿಕದ ಮೊದಲ ಮಹಿಳಾ ಖಜಾನೆ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಎಲೆನ್‌ ಅವರು ಇದೇ ಮೊದಲ ಬಾರಿ ನಿರ್ಮಲಾ ಸೀತಾರಾಮನ್‌ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ.

ಕೋವಿಡ್‌ನಿಂದ ಜಾಗತಿಕ ಚೇತರಿಕೆ, ಅಸಮಾನತೆ ವಿರುದ್ಧ ಹೋರಾಟ ಮತ್ತು ಹವಾಮಾನ ವೈಪರೀತ್ಯದ ಕಾರ್ಯಸೂಚಿ– ಈ ವಿಷಯಗಳಲ್ಲಿ ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದರು.

‘ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಅಮೆರಿಕದ ಖಜಾನೆ ಕಾರ್ಯದರ್ಶಿ ಜಾನೆಟ್ ಎಲೆನ್‌ ಅವರೊಂದಿಗೆ ಜಾಗತಿಕ ಆರ್ಥಿಕ ದೃಷ್ಟಿಕೋನದ ಬಗ್ಗೆ ದೂರವಾಣಿ ಮೂಲಕ ಚರ್ಚೆ ನಡೆಸಿದರು. ಈ ವೇಳೆ ಎಲೆನ್‌ ಕೋವಿಡ್‌ ಲಸಿಕೆಗಾಗಿ ಭಾರತ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು’ ಎಂದು ಹಣಕಾಸು ಸಚಿವಾಲಯ ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT