ಶುಕ್ರವಾರ, ಸೆಪ್ಟೆಂಬರ್ 24, 2021
21 °C

ತಮಿಳುನಾಡು ಜೊತೆ ಇಂಗ್ಲಿಷ್‌ನಲ್ಲೇ ಸಂವಹನ: ಮದ್ರಾಸ್‌ ಹೈಕೋರ್ಟ್‌ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ತಮಿಳುನಾಡಿನ ಜೊತೆ ಸಂವಹನ ನಡೆಸುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಇಂಗ್ಲಿಷ್‌ ಮಾತ್ರ ಬಳಸಬೇಕು ಎಂದು ಮದ್ರಾಸ್‌ ಹೈಕೋರ್ಟ್‌ನ ಮದುರೈ ಪೀಠ ಆದೇಶಿಸಿದೆ.

‘ದಕ್ಷಿಣ ರಾಜ್ಯಗಳೊಂದಿಗೆ ಸಂವಹನ ನಡೆಸಲು ಕೇಂದ್ರ ಸರ್ಕಾರ ಇಂಗ್ಲಿಷ್‌ ಭಾಷೆಯನ್ನೇ ಬಳಸಬೇಕು. ಹಿಂದಿಯನ್ನು ಬಳಸಕೂಡದು’ ಎಂದು ಹೈಕೋರ್ಟ್‌ನ ಪೀಠವು ಆಗಸ್ಟ್‌ನಲ್ಲಿ ಆದೇಶ ಹೊರಡಿಸಿದೆ. ಈ ಆದೇಶದ ಪ್ರತಿಯನ್ನು ಇತ್ತೀಚೆಗಷ್ಟೆ ಬಹಿರಂಗಪಡಿಸಲಾಗಿದೆ.

ಈ ಸಂಬಂಧ, ಮದುರೈ ಸಂಸದ ಹಾಗೂ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಸು.ವೆಂಕಟೇಶನ್‌ ಅವರು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಪೀಠ ಈ ಆದೇಶ ಹೊರಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು