ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಹಾವು ಕಚ್ಚಿಸಿ ಪತ್ನಿ ಕೊಲೆ: ಮರಣದಂಡನೆಯ ಬದಲು ಜೀವಾವಧಿ, 17 ವರ್ಷ ಸೆರೆವಾಸ

Last Updated 14 ಅಕ್ಟೋಬರ್ 2021, 6:20 IST
ಅಕ್ಷರ ಗಾತ್ರ

ಕೊಲ್ಲಂ(ಕೇರಳ):ಹಾವಿನಿಂದ ಕಚ್ಚಿಸಿ ಪತ್ನಿ ಉತ್ರಾ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೇರಳದ ಸೆಷನ್ಸ್ ನ್ಯಾಯಾಲಯ ಬುಧವಾರ ಪತಿ ಸೂರಜ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಸೂರಜ್ ಎಸ್ ಕುಮಾರ್ ವಿರುದ್ಧ ಕೊಲೆ, ವಿಷ ಪ್ರಾಶನ, ಸಾಕ್ಷ್ಯ ನಾಶ ಪ್ರಕರಣ ದಾಖಲಾಗಿತ್ತು ಅಲ್ಲದೆ ತನ್ನ 25 ವರ್ಷದ ಪತ್ನಿ ಉತ್ರಾ ಅವರನ್ನು ಮೊದಲ ಬಾರಿಗೆ ಹಾವಿನಿಂದ ಕಚ್ಚಿಸಿ ಸಾಯಿಸಲು ಯತ್ನಿಸಿದ್ದನ್ನೂ ಕೊಲೆ ಎಂದು ಪರಿಗಣಿಸಿದ ನ್ಯಾಯಾಲಯ, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ–VI ಮನೋಜ್ ಎಂ ಅವರು ಶಿಕ್ಷೆಯ ತೀರ್ಪನ್ನು ಪ್ರಕಟಿಸಿದ್ದಾರೆ. ’ಇದೊಂದು ಅಪರೂಪದ ಪ್ರಕರಣವಾಗಿದೆ. ಅಪರಾಧಿ ವಯಸ್ಸು 28 ವರ್ಷಗಳಾಗಿರುವುದರಿಂದ, ಮರಣದಂಡನೆಯ ಬದಲಿಗೆ ಜೀವಾವಧಿ ಶಿಕ್ಷೆ ನೀಡಲು ತೀರ್ಮಾನಿಸಿದರು’ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಜಿ ಮೋಹನರಾಜ್ ನ್ಯಾಯಾಲಯದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

ಆರೋಪಿ ಕುಮಾರ್‌ಗೆ, ಕೊಲೆ ಆರೋಪ ಸಾಬೀತಾಗಿದ್ದಕ್ಕೆ ಜೀವಾವಧಿ ಶಿಕ್ಷೆ, ಕೊಲೆ ಯತ್ನಕ್ಕೆ ಜೀವಾವಧಿ ಶಿಕ್ಷೆ ಹಾಗೂ ವಿಷ ಉಣಿಸಿದ್ದಕ್ಕೆ 10 ವರ್ಷ ಹಾಗೂ ಸಾಕ್ಷ್ಯ ನಾಶಕ್ಕಾಗಿ 7 ವರ್ಷಗಳ ಕಾಲ ನ್ಯಾಯಾಲಯ ಶಿಕ್ಷೆ ವಿಧಿಸಿದೆ ಎಂದು ಎಸ್‌ಪಿಪಿ ತಿಳಿಸಿದರು.

ವಿಷಪ್ರಾಶನ ಮತ್ತು ಸಾಕ್ಷ್ಯಾಧಾರಗಳ ನಾಶಕ್ಕಾಗಿ ವಿಧಿಸಿದ ಶಿಕ್ಷೆಯನ್ನು ಮೊದಲು ನೀಡಬೇಕು ಎಂದು ನ್ಯಾಯಾಲಯ ನಿರ್ದಿಷ್ಟವಾಗಿ ನಿರ್ದೇಶಿಸಿದೆ ಎಂದು ಅವರು ಹೇಳಿದರು. ಒಟ್ಟು 17 ವರ್ಷಗಳ ಸೆರೆವಾಸ ಮತ್ತು ನಂತರ ಆತನ ಜೀವಾವಧಿ ಶಿಕ್ಷೆ ಆರಂಭವಾಗುತ್ತದೆ.

ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಎ.ಕೆ.ಮನೋಜ್ ಅವರು ಈ ಆದೇಶವನ್ನು ದೃಢಪಡಿಸಿದರು. ಅಪರಾಧಿಗೆ ನ್ಯಾಯಾಲಯ ₹ 5.85 ಲಕ್ಷ ದಂಡ ವಿಧಿಸಿದೆ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT