ಭಾನುವಾರ, ಏಪ್ರಿಲ್ 2, 2023
31 °C

ಉತ್ತರಾಖಂಡ: ಇಂದು ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಡೆಹ್ರಾಡೂನ್‌: ಉತ್ತರಾಖಂಡದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಶನಿವಾರ ಮಧ್ಯಾಹ್ನ ನಡೆಯಲಿದ್ದು, ನೂತನ ನಾಯಕನ ಆಯ್ಕೆ ನಡೆಯಲಿದೆ.

ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಕೇಂದ್ರದ ನಾಯಕರಾದ ನರೇಂದ್ರ ತೋಮರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರಾಖಂಡ ಉಸ್ತುವಾರಿ ದುಷ್ಯಂತ್ ಕುಮಾರ್ ಗೌತಮ್ ಪಾಲ್ಗೊಳ್ಳುವರು.

ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕಾಗಿ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಹಲವು ನಾಯಕರ ಹೆಸರುಗಳು ಮುನ್ನೆಲೆಗೆ ಬಂದಿವೆ. ಮುಖಂಡ ಚೌಬಟ್ಟಾಖಲ್‌, ಸಚಿವ ಸತ್ಪಾಲ್ ಮಹಾರಾಜ್‌, ಶಾಸಕರಾದ ಧನ್ ಸಿಂಗ್ ರಾವತ್, ಶಾಸಕ ಪುಷ್ಕರ್ ಸಿಂಗ್ ಧಾಮಿ ಅವರ ಹೆಸರುಗಳು ಕೇಳಿ ಬರುತ್ತಿವೆ.

ಪಕ್ಷದ ಹಲವು ಮುಖಂಡರು, ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌ ಅವರ ಹೆಸರನ್ನು ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ತೀರಥ್ ಸಿಂಗ್ ರಾವತ್ ಅವರು ಶುಕ್ರವಾರ ರಾಜೀನಾಮೆ ನೀಡಿದ್ದರಿಂದ ನೂತನ ಸಾರಥಿಯ ಆಯ್ಕೆಗಾಗಿ ಬಿಜೆಪಿ ಪಾಳೆಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿವೆ. ತೀರಥ್‌ ಸಿಂಗ್‌ ಅವರು ರಾಜೀನಾಮೆ ನೀಡುವ ಮೂಲಕ, ಪಕ್ಷದ ನಾಯಕತ್ವ ಬದಲಾವಣೆ ಕುರಿತು ಕೆಲವು ದಿನಗಳಿಂದ ಕೇಳಿ ಬರುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಪಕ್ಷದ ಸೂಚನೆ ನೀಡಿದ ಬೆನ್ನಲ್ಲೇ, ಅವರು ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರಿಗೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು