ಚಿತ್ರಕೂಟ (ಉತ್ತರ ಪ್ರದೇಶ): ಅತ್ಯಾಚಾರಕ್ಕೊಳಗಾಗಿದ್ದ 13 ವರ್ಷದ ಬಾಲಕಿಯೊಬ್ಬಳು ಗುರುವಾರ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಕೆಲವೇ ನಿಮಿಷಗಳಲ್ಲಿ ಮಗು ಮೃತಪಟ್ಟಿದೆ.

ಆರೋಪಿ ಸಿಕಂದರ್ ಅಲಿಯಾಸ್ ಅಮರನಾಥ್ ತಿವಾರಿ ಎಂಬಾತನನ್ನು ಬಂಧಿಸಲಾಗಿದ್ದು, ಮಗುವಿನ ಮರಣೋತ್ತರ ಪರೀಕ್ಷೆ ಮತ್ತು ಡಿಎನ್‌ಎ ಪರೀಕ್ಷೆಗಳ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ವೀರೇಂದ್ರ ತ್ರಿಪಾಠಿ ತಿಳಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ತನ್ನ ಮನೆಗೆ ಕರೆಸಿಕೊಂಡು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ, ಬಳಿಕ ಬೆದರಿಕೆ ಒಡ್ಡಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇದೇ 7ರಂದು ಬಾಲಕಿ ಗರ್ಭಿಣಿ ಎಂದು ಗೊತ್ತಾದ ಬಳಿಕ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯನ್ನು ಇದೇ 9ರಂದು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.