ಬುಧವಾರ, ಮಾರ್ಚ್ 22, 2023
32 °C

ಉತ್ತರ ಪ್ರದೇಶ | ಕಾರಿಗೆ ಟ್ರಕ್ ಡಿಕ್ಕಿ; 6 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಉನ್ನಾವ್: ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಚಲ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಲಖನೌ-ಕಾನ್ಪುರ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಅಪಘಾತ ನಡೆದಿದೆ. 

ಡಿಕ್ಕಿ ಹೊಡೆದ ರಭಸಕ್ಕೆ ಸ್ವಲ್ಪ ದೂರದವರೆಗೆ ಎಳೆದೊಯ್ಯಲ್ಪಟ್ಟ ಕಾರು ಮಹಿಳೆ ಮತ್ತು ಆಕೆಯ ಮಗಳಿಗೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಶಂಕರ್ ಮೀನಾ ತಿಳಿಸಿದ್ದಾರೆ.

ಇದನ್ನೂ ಓದಿ: 

ಇಬ್ಬರು ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಛೋಟೆಲಾಲ್ (32), ಶಿವಾಂಗ್ (30), ವಿಮಲೇಶ್ (60), ರಾಮ್‌ಪ್ಯಾರಿ (45) ಮತ್ತು ಆಕೆಯ ಮಗಳು ಶಿವಾನಿ (13) ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಮೃತದೇಹದ ಗುರುತು ಇನ್ನಷ್ಟೇ ಪತ್ತೆಹಚ್ಚಬೇಕಿದೆ.

ಅಪಘಾತದ ಬಳಿಕ ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿದರು. ಬಳಿಕ ಪೊಲೀಸರ ಮಧ್ಯಸ್ಥಿಕೆಯಲ್ಲಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉನ್ನಾವ್ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು