ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

70 ವರ್ಷದ ಮಹಿಳೆ ಮೇಲೆ ಅತ್ಯಾಚಾರ, 98 ವರ್ಷದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನ

Last Updated 30 ಆಗಸ್ಟ್ 2021, 15:18 IST
ಅಕ್ಷರ ಗಾತ್ರ

ಬಲ್ಲಿಯಾ: ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ 70 ವರ್ಷದ ಮಹಿಳೆ ಮೇಲೆ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಬಲ್ಲಿಯಾ ಜಿಲ್ಲೆಯಲ್ಲಿ 98 ವರ್ಷದ ವೃದ್ಧೆ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸದ್ಯ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಬಲ್ಲಿಯಾದ ರಾಸ್ಡಾ ಪ್ರದೇಶದಲ್ಲಿರುವ ತನ್ನ ಮನೆಯಲ್ಲಿದ್ದ ಮಹಿಳೆ ಮೇಲೆ ಆಗಸ್ಟ್ 20ರಂದು 22 ವರ್ಷದ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ.

ರಾಸ್ಡಾ ಪೊಲೀಸ್ ಠಾಣೆಯ ಎಸ್‌ಎಚ್ಒ ನಾಗೇಶ್ ಉಪಾಧ್ಯಾಯ ಮಾತನಾಡಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಎಫ್‌‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಸೋನು ಎಂದು ಗುರುತಿಸಲಾಗಿದೆ. ಸದ್ಯ ಆತನನ್ನು ಬಂಧಿಸಲಾಗಿದೆ.

ಪ್ರಕರಣ ದಾಖಲಿಸಲು ಪೊಲೀಸರು ಆರಂಭದಲ್ಲಿ ನಿರಾಕರಿಸಿದರು, ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಗದ್ದಲ ಉಂಟಾದ ನಂತರ ಪ್ರಕರಣ ದಾಖಲಿಸಿಕೊಂಡರು ಎಂದು ಮಹಿಳೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಮತ್ತೊಂದು ಪ್ರಕರಣದಲ್ಲಿ ಫತೇಪುರ ಜಿಲ್ಲೆಯಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯು ಭಿಕ್ಷುಕಿಯಾಗಿದ್ದು, ಆಕೆ ತಾರಿಣಾವ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಾಥಮಿಕ ಶಾಲಾ ಕಟ್ಟಡದಲ್ಲಿ ಮಲಗುತ್ತಿದ್ದಳು.

ಭಾನುವಾರ ರಾತ್ರಿ ಆರೋಪಿ ಲಕ್ಷ್ಮಿ ಲೋಧಿ (32) ಮದ್ಯಪಾನ ಮಾಡಿ ಶಾಲೆಯ ಬಳಿಗೆ ಬಂದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಾರಿಣಾವ್ ಪೊಲೀಸ್ ಠಾಣೆ ಎಸ್ಎಚ್ಒ ನಂದಗಾಲ್ ಸಿಂಗ್ ತಿಳಿಸಿದ್ದಾರೆ.

ಸದ್ಯ ಲೋಧಿಯನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಾಗಿದೆ. ವೈದ್ಯಕೀಯ ತಪಾಸಣೆಗಾಗಿ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT