ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಆಯೋಗದ ಎಂಪಿಐ ರ‍್ಯಾಂಕಿಂಗ್‌ನಲ್ಲಿ ಉತ್ತರಪ್ರದೇಶಕ್ಕೆ ಕಳಪೆ ಸ್ಥಾನ: ಅಖಿಲೇಶ್

Last Updated 21 ಮಾರ್ಚ್ 2022, 10:03 IST
ಅಕ್ಷರ ಗಾತ್ರ

ಲಖನೌ: ನೀತಿ ಆಯೋಗದ ರಾಷ್ಟ್ರೀಯ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿ (ಎಂಪಿಐ) ಉತ್ತರ ಪ್ರದೇಶವು ಅತ್ಯಂತ ಕಳಪೆ ಸ್ಥಾನದಲ್ಲಿದೆ ಎಂದು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಯಾದವ್,'ನೀತಿ ಆಯೋಗದ ಮೊದಲಬಹು ಆಯಾಮದ ಬಡತನ ಸೂಚ್ಯಂಕದಲ್ಲಿ ಅತ್ಯಂತ ಕಳಪೆ ಸ್ಥಾನದಲ್ಲಿರುವ ಮೂರು ರಾಜ್ಯಗಳ ಪೈಕಿ, ಬಿಜೆಪಿ ಆಡಳಿತವಿರುವಉತ್ತರ ಪ್ರದೇಶವೂ ಒಂದಾಗಿದೆ. ಅತಿಹೆಚ್ಚು ಅಪೌಷ್ಠಿಕತೆ ಇರುವ ರಾಜ್ಯಗಳ ಪಟ್ಟಿಯಲ್ಲಿಯೂ ಉತ್ತರ ಪ್ರದೇಶ ಮೂರನೇ ಸ್ಥಾನದಲ್ಲಿದೆ. ಮಕ್ಕಳು ಮತ್ತು ಯುವಕರ ಮರಣ ದರದಲ್ಲಿ ಅತ್ಯಂತ ಕೆಳ ಸ್ಥಾನದಲ್ಲಿದೆ. ಇವು ಬಿಜೆಪಿ ಸರ್ಕಾರದ ವೈಫಲ್ಯದ ಸಂಕೇತಗಳು' ಎಂದು ದೂರಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ವರದಿಯ ಚಿತ್ರವನ್ನೂ ಅವರು ಹಂಚಿಕೊಂಡಿದ್ದಾರೆ.

ನೀತಿ ಆಯೋಗದ ಎಂಪಿಐ ಸೂಚ್ಯಂಕದ ಪ್ರಕಾರ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶವು ದೇಶದಲ್ಲೇ ಅತ್ಯಂತ ಕಳಪೆ ಸ್ಥಾನದಲ್ಲಿರುವ ರಾಜ್ಯಗಳಾಗಿವೆ.

ಸೂಚ್ಯಂಕದ ಪ್ರಕಾರ ಬಿಹಾರದ ಶೇ 51.91 ರಷ್ಟು ಜನರು ಬಡವರಾಗಿದ್ದಾರೆ. ಈ ಪ್ರಮಾಣವು ಜಾರ್ಖಂಡ್‌ನಲ್ಲಿ ಶೇ 42.16 ಮತ್ತು ಉತ್ತರ ಪ್ರದೇಶದಲ್ಲಿ ಶೇ 37.79 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT