ಸೋಮವಾರ, ಜನವರಿ 17, 2022
19 °C

ಉ.ಪ್ರದೇಶದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ: ಸಚಿವ ದಾರಾ ಸಿಂಗ್ ಚೌಹಾಣ್ ರಾಜೀನಾಮೆ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ಭಾರಿ ಯತ್ನ ನಡೆಸಿರುವ ಆಡಳಿತಾರೂಢ ಬಿಜೆಪಿಯು ಸರಣಿ ಆಘಾತಗಳನ್ನು ಎದುರಿಸುತ್ತಿದೆ. 

ಯೋಗಿ ಆದಿತ್ಯನಾಥ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ, ಪ್ರಭಾವಿ ನಾಯಕ ಸ್ವಾಮಿ ಪ್ರಸಾದ್‌ ಮೌರ್ಯ ಅವರು ಮಂಗಳವಾರ ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರಿದ್ದರು. 

ಮೌರ್ಯ ಅವರೊಂದಿಗೆ ಶಾಸಕರಾದ ರೋಶನ್‌ ಲಾಲ್‌ ವರ್ಮಾ, ಭಗವತಿ ಸಾಗರ್‌ ಮತ್ತು ಬ್ರಿಜೇಶ್‌ ಪ್ರಜಾಪತಿ ಅವರೂ ಬಿಜೆಪಿ ಬಿಟ್ಟು ಎಸ್‌ಪಿಗೆ ಸೇರ್ಪಡೆಗೊಂಡಿದ್ದರು. 

ಬಿಜೆಪಿಗೆ ಇಂದು ಮತ್ತೆ ಆಘಾತ ಎದುರಾಗಿದೆ. ಯೋಗಿ ಸರ್ಕಾರದಲ್ಲಿ ಸಚಿವರಾಗಿದ್ದ, ರಜಪೂತ್‌ ಸಮುದಾಯದ ಪ್ರಬಲ ನಾಯಕ ದಾರಾ ಸಿಂಗ್ ಚೌಹಾಣ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ಬುಧವಾರ ಟ್ವೀಟಿಸಿದೆ.  

‘ದಲಿತರು, ಹಿಂದುಳಿದ ಸಮುದಾಯಗಳ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಆದರೆ, ಅವರಿಗೆ ಉತ್ತಮ ಸೇವೆಯನ್ನು ಯೋಗಿ ಸರ್ಕಾರ ನೀಡಲಿಲ್ಲ. ಅದಕ್ಕಾಗಿಯೇ ರಾಜೀನಾಮೆ ನೀಡಿದ್ದೇನೆ. ನನ್ನ ಸಮುದಾಯದವರೊಂದಿಗೆ ಚರ್ಚೆ ನಡೆಸಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ದಾರಾ ಸಿಂಗ್ ಚೌಹಾಣ್ ತಿಳಿಸಿದ್ದಾರೆ. 

403 ಸದಸ್ಯ ಬಲವನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.  

ಇವನ್ನೂ ಓದಿ...

ವಿಧಾನಸಭೆ ಚುನಾವಣೆ 2022: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ‘ವಲಸೆ’ ಬಿಸಿ

ಬಿಜೆಪಿಗೆ ಅಮೆಜಾನ್‌ನಲ್ಲಿ ಬೀಗ ಬುಕ್‌ ಮಾಡಿ ಗೇಲಿ ಮಾಡಿದ ಎಸ್‌ಪಿ ​

UP Elections 2022: ಒಬಿಸಿ ನಾಯಕರ ಬೆನ್ನಲ್ಲೇ ಬಿಜೆಪಿ ತೊರೆದ ‘ಗುಜ್ಜಾರ್’ ನಾಯಕ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು