ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ ಚುನಾವಣೆ: 54 ಕ್ಷೇತ್ರಗಳಲ್ಲಿ ಅಂತಿಮ ಹಂತದ ಮತದಾನ ಆರಂಭ

Last Updated 7 ಮಾರ್ಚ್ 2022, 2:11 IST
ಅಕ್ಷರ ಗಾತ್ರ

ಲಖನೌ:ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ಇಂದು (ಸೋಮವಾರ) ಬೆಳಗ್ಗೆ 7ಕ್ಕೆ ಆರಂಭವಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಪ್ರತಿನಿಧಿಸುವ ವಾರಾಣಸಿ ಸೇರಿದಂತೆ 9 ಜಿಲ್ಲೆಗಳ ಒಟ್ಟು 54 ವಿಧಾನಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.2.6 ಕೋಟಿ ಅರ್ಹ ಮತದಾರರು, ಕಣದಲ್ಲಿರುವ 613 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

ವಾರಾಣಸಿ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಸ್ಥಾನಗಳಿವೆ. ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರು 2019ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಅಜಂಗಡದಲ್ಲಿ 10 ಕ್ಷೇತ್ರಗಳಿವೆ.

12,205 ಕೇಂದ್ರಗಳ, 23,535 ಬೂತ್‌ಗಳಲ್ಲಿ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಹೊರಬೀಳಲಿದೆ.

ಈ ಚುನಾವಣೆಯಲ್ಲಿ ಪ್ರಧಾನಿ ಮೋದಿ ವರ್ಚಸ್ಸನ್ನೇ ಬಿಜೆಪಿ ಸಂಪೂರ್ಣವಾಗಿ ನೆಚ್ಚಿಕೊಂಡಿದೆ.ಕೋವಿಡ್‌ ನಿರ್ವಹಣೆ, ರಾಜ್ಯದಲ್ಲಿನ ಕಾನೂನು–ಸುವ್ಯವಸ್ಥೆ ಸ್ಥಿತಿ, ಆರ್ಥಿಕತೆ, ರೈತರ ಸಮಸ್ಯೆಗಳೇ ಪ್ರಚಾರದ ವಿಷಯಗಳಾಗಿದ್ದವು. ಈ ವಿಚಾರಗಳನ್ನೇ ಮುಂದಿಟ್ಟುಕೊಂಡು ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಾಯಕರು ಆರೋಪ–ಪ್ರತ್ಯಾರೋಪ ನಡೆಸಿದ್ದರು.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ 7 ಹಂತಗಳಲ್ಲಿ ಚುನಾವಣೆ ನಿಗದಿಯಾಗಿತ್ತು. ಈಗಾಗಲೇ 6 ಹಂತಗಳ (ಫೆಬ್ರುವರಿ 10, 14,20, 23, 27 ಮತ್ತು ಮಾರ್ಚ್‌ 3) ಮತದಾನ ಪ್ರಕ್ರಿಯೆ ಮುಗಿದಿದೆ.

ಕಳೆದ (2017ರ) ವಿಧಾನ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಎಸ್‌ಪಿ 47, ಬಿಎಸ್‌ಪಿ 19 ಕ್ಷೇತ್ರಗಳಲ್ಲಿ ಜಯ ಕಂಡರೆ, ಕಾಂಗ್ರೆಸ್ ಕೇವಲ 7 ಕಡೆ ಖಾತೆ ತೆರೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT