ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UP polls: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ, 24 ಮಹಿಳೆಯರಿಗೆ ಅವಕಾಶ

Last Updated 30 ಜನವರಿ 2022, 10:53 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಕಾಂಗ್ರೆಸ್‌ ಭಾನುವಾರ ಪ್ರಕಟಿಸಿದೆ.

ಒಟ್ಟು 61 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದ್ದು, ಅದರಲ್ಲಿ 24 ಮಹಿಳೆಯರಿಗೆ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ರಾಯ್‌ ಬರೇಲಿ ಮತ್ತು ಅಮೇಠಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ.

ಮೊದಲ ಪಟ್ಟಿಯಲ್ಲಿ ಪ್ರಕಟಿಸಲಾದ 125 ಅಭ್ಯರ್ಥಿಗಳ ಪೈಕಿ 50 ಅಭ್ಯರ್ಥಿಗಳು ಮಹಿಳೆಯರು, ಎರಡನೇ ಪಟ್ಟಿಯಲ್ಲಿನ 41 ಅಭ್ಯರ್ಥಿಗಳಲ್ಲಿ 16 ಜನ ಮಹಿಳೆಯರು ಹಾಗೂ 89 ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ 37 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿತ್ತು.

ಈ ಬಾರಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ ಒಟ್ಟು ಅಭ್ಯರ್ಥಿಗಳ ಪೈಕಿ ಶೇಕಡ 40 ಮಹಿಳಾ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದರು.

ಮೊದಲ ಪಟ್ಟಿಯಲ್ಲಿ 2017ರ ಉನ್ನಾವೊ ಸಂತ್ರಸ್ತೆಯ ತಾಯಿ ಆಶಾ ದೇವಿ ಅವರಿಗೆ ಟಿಕೆಟ್ ನೀಡಲಾಗಿದೆ. ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲು ನಡೆದ ಹೋರಾಟದ ನೇತೃತ್ವ ವಹಿಸಿದ್ದ ಪೂನಂ ಪಾಂಡೆ ಅವರಿಗೆ ಷಹಜಹಾನ್‌ಪುರದಿಂದ ಟಿಕೆಟ್ ಘೋಷಿಸಲಾಗಿದೆ. ಸಂಘ ಸಂಸ್ಥೆಗಳಿಂದ ಹಿಡಿದು ಪತ್ರಕರ್ತರ ವರೆಗೂ, ಹೋರಾಟ ನಡೆಸುತ್ತಿರುವ ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ ಪ್ರಿಯಾಂಕಾ ಹೇಳಿದ್ದರು.

ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.ಮಾರ್ಚ್‌ 10ರಂದು ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT