ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಅಲ್‌ ಖೈದಾದೊಂದಿಗೆ ನಂಟು ಹೊಂದಿದ್ದ ಇಬ್ಬರು ಉಗ್ರರ ಬಂಧನ

Last Updated 11 ಜುಲೈ 2021, 20:19 IST
ಅಕ್ಷರ ಗಾತ್ರ

ಲಖನೌ:‘ಉತ್ತರ ಪ್ರದೇಶದಲ್ಲಿ ಸಕ್ರಿಯವಾಗಿದ್ದಅಲ್‌ ಕೈದಾ ಉಗ್ರ ಸಂಘಟನೆಯ ಘಟಕವೊಂದನ್ನು ಪತ್ತೆ ಮಾಡಿದ್ದೇವೆ. ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದೇವೆ. ಅವರಿಂದ ಭಾರಿ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ’ ಎಂದು ಉತ್ತರ ಪ್ರದೇಶ ಭಯೋತ್ಪಾದನೆ ನಿಗ್ರಹ ಪಡೆ ಭಾನುವಾರ ಹೇಳಿದೆ.

ಉತ್ತರ ಪ್ರದೇಶ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಮಿನಾಜ್ ಅಹ್ಮದ್ ಮತ್ತು ಮುಶ್ರುದ್ದೀನ್ ಅಲಿಯಾಸ್ ಮುಶೀರ್ ಎಂದು ಗುರುತಿಸಲಾಗಿದೆ.

‘ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ರಾಜ್ಯದ ರಾಜಧಾನಿಯ ಜನನಿಬಿಡ ಪ್ರದೇಶದಲ್ಲಿ ಸ್ಫೋಟ ನಡೆಸಲು ಇವರು ಸಂಚು ರೂಪಿಸಿದ್ದರು. ಇವರ ಜತೆಗಾರರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದೇವೆ. ಮತ್ತಷ್ಟು ಶಂಕಿತರನ್ನು ಬಂಧಿಸಲು ಬೇರೆ ಬೇರೆ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ’ ಎಂದು ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

‘ಲಖನೌನ ಹೊರವಲಯದಲ್ಲಿ ಇರುವ ಕಾಕೋರಿ ಪ್ರದೇಶದ ಮನೆಯೊಂದರಲ್ಲಿ ಶಂಕಿತ ಉಗ್ರರು ಅಡಗಿದ್ದರು. ನಿಖರ ಮಾಹಿತಿ ಮೇರೆಗೆ ಅಲ್ಲಿ ಶೋಧ ಕಾರ್ಯ ನಡೆಸಲಾಯಿತು. ಇವರಿಬ್ಬರು ಸಿಕ್ಕಿಬಿದ್ದರು. ಬಂಧಿತ ಮಿನಾಜ್ ಮತ್ತು ಮುಶೀರ್ ಅವರಿಗೆ ಪಾಕಿಸ್ತಾನದ ಪೆಷಾವರ ಮತ್ತು ಕ್ವೆಟ್ಟಾದಿಂದ ನಿರ್ದೇಶನಗಳು ಬರುತ್ತಿದ್ದವು’ ಎಂದು ಕುಮಾರ್ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT