ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಾದುದ್ದೀನ್ ಒವೈಸಿ ‘ರಾಜಕೀಯ ಉಗ್ರ’: ಬಿಜೆಪಿ ಶಾಸಕ ಸುರೇಂದ್ರ ಸಿಂಗ್‌

Last Updated 30 ಜೂನ್ 2021, 8:52 IST
ಅಕ್ಷರ ಗಾತ್ರ

ಬಲ್ಲಿಯಾ(ಉತ್ತರ ಪ್ರದೇಶ): ‘ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು ‘ರಾಜಕೀಯ ಕ್ಷೇತ್ರದ ಭಯೋತ್ಪಾದಕ . ಅವರು ಜನರಿಗೆ ಪ್ರಚೋದನೆ ನೀಡಿ ಸಮಾಜ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಪೋಸ್ಟ್‌ವೊಂದರ ಬಗ್ಗೆ ಪ್ರಸ್ತಾಪಿಸಿದ ಅವರು, ‘ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಬರಬಹುದು' ಎಂದು ಹೇಳಿದ್ದಾರೆ.

ಬೈರಿಯಾದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ‘ದೇಶದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವವರೆಗೆ ಎಐಎಂಐಎಂ ನಾಯಕ ನಾಯಕ ಒವೈಸಿಗೆ ಭಾರತದ ಜಾತ್ಯತೀತತೆಯ ಬಗ್ಗೆ ನಂಬಿಕೆ ಇರಬೇಕು. ಅಸಾದುದ್ದೀನ್ ಒವೈಸಿ ರಾಜಕೀಯ ಕ್ಷೇತ್ರದ ಭಯೋತ್ಪಾದಕ. ಅವರು ಸಮಾಜದಲ್ಲಿ ಒಡಕು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಪಶ್ಚಿಮ ಬಂಗಾಳವು ಜಮ್ಮು–ಕಾಶ್ಮೀರದ ಹಾದಿಯಲ್ಲಿ ಸಾಗುತ್ತಿದೆ. ಅಲ್ಲಿನ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT