ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿ: ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ, 24 ಜಿಲ್ಲೆಗಳಲ್ಲಿ ಪರೀಕ್ಷೆ ರದ್ದು

Last Updated 30 ಮಾರ್ಚ್ 2022, 10:07 IST
ಅಕ್ಷರ ಗಾತ್ರ

ಲಖನೌ: ದ್ವಿತೀಯ ಪಿಯು ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಬುಧವಾರ ಉತ್ತರ ಪ್ರದೇಶದ 24 ಜಿಲ್ಲೆಗಳಲ್ಲಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಮಾಧ್ಯಮಿಕ ಶಿಕ್ಷಣ ಪರಿಷತ್ ತಿಳಿಸಿದೆ.

ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಪರೀಕ್ಷೆ ನಡೆಯಬೇಕಿತ್ತು.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಬಲ್ಲಿಯಾ ಜಿಲ್ಲೆಯಲ್ಲಿ 12ನೇ ತರಗತಿಯ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಶಿಕ್ಷಣ ಸಚಿವೆ ಗುಲಾಬ್ ದೇವಿ ತಿಳಿಸಿದ್ದಾರೆ.

ಕೇವಲ 24 ಜಿಲ್ಲೆಗಳಲ್ಲಿ ಮಾತ್ರ ಏಕೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಗುಲಾಬ್ ದೇವಿ, ಸೋರಿಕೆಯಾಗಿರುವ ಪ್ರಶ್ನೆ ಪತ್ರಿಕೆಗಳನ್ನು ಕೇವಲ 24 ಜಿಲ್ಲೆಗಳಲ್ಲಿ ಮಾತ್ರ ಹಂಚಿಕೆಯಾಗಿರುವುದು ತಿಳಿದು ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪರೀಕ್ಷೆ ಆರಂಭಕ್ಕೂ ಮುನ್ನವೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಮಾಧ್ಯಮಿಕ ಶಿಕ್ಷಣ) ಆರಾಧನಾ ಶುಕ್ಲಾ ತಿಳಿಸಿದ್ದಾರೆ.

ಉಳಿದ 51 ಜಿಲ್ಲೆಗಳಲ್ಲಿ ಎಂದಿನಂತೆ ಇಂಗ್ಲಿಷ್ ಪರೀಕ್ಷೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT