ಸೋಮವಾರ, ಮೇ 10, 2021
21 °C

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೋವಿಡ್‌

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Prajavani

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಬುಧವಾರ ಟ್ವೀಟ್‌ ಮಾಡಿದ್ದು, ಪರೀಕ್ಷೆಯಲ್ಲಿ ಕೋವಿಡ್‌–19 ಪಾಸಿಟಿವ್‌ ಇರುವುದು ಪತ್ತೆಯಾಗಿದೆ ಎಂದಿದ್ದಾರೆ.

ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಅಭಿಷೇಕ್ ಕೌಶಿಕ್ ಸೇರಿದಂತೆ ಸಿಎಂ ಕಚೇರಿಯ ಕೆಲವು ಅಧಿಕಾರಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಅದರ ಬೆನ್ನಲ್ಲೇ ಮಂಗಳವಾರ ಯೋಗಿ ಆದಿತ್ಯನಾಥ್ ಅವರು ಪ್ರತ್ಯೇಕ ವಾಸದಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಅವರಿಗೆ ಕೋವಿಡ್‌ ದೃಢಪಟ್ಟಿದೆ.

'ಸೋಂಕು ಲಕ್ಷಣಗಳು ಕಂಡು ಬರುತ್ತಿದ್ದಂತೆ ನಾನು ಕೋವಿಡ್‌–19 ಪರೀಕ್ಷೆಗೆ ಒಳಗಾದೆ, ಪರೀಕ್ಷೆಯಲ್ಲಿ ಕೋವಿಡ್‌ ಪಾಸಿಟಿವ್‌ ಇರುವುದು ಪತ್ತೆಯಾಗಿದೆ. ನಾನು ಪ್ರತ್ಯೇಕ ವಾಸದಲ್ಲಿದ್ದು, ವೈದ್ಯರ ಸಲಹೆಯಂತೆ ಮುಂದುರಿದಿದ್ದೇನೆ. ಎಲ್ಲ ಕಾರ್ಯಗಳನ್ನು ವರ್ಚ್ಯುವಲ್‌ ಆಗಿ ನಡೆಸುತ್ತಿದ್ದೇನೆ' ಎಂದು ಬುಧವಾರ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ.

ಮುಖ್ಯಮಂತ್ರಿ ಮಂಗಳವಾರದ ಟ್ವೀಟ್‌ನಲ್ಲಿ 'ನನ್ನ ಜತೆ ಸಂಪರ್ಕದಲ್ಲಿದ್ದ ಕೆಲವರಲ್ಲಿ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತ್ಯೇಕ ವಾಸದಲ್ಲಿದ್ದೇನೆ. ವರ್ಚುವಲ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ' ಎಂದಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು