ಶುಕ್ರವಾರ, ಮೇ 27, 2022
21 °C

ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಹಂಚಿಕೆ ಅಭಿಯಾನಕ್ಕೆ ಸಿ.ಎಂ ಯೋಗಿ ಚಾಲನೆ

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ ಫೋನ್‌ ಮತ್ತು ಟ್ಯಾಬ್ಲೆಟ್‌ಗಳನ್ನು ವಿತರಿಸುವ ಅಭಿಯಾನಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅವರು ಶನಿವಾರ ಚಾಲನೆ ನೀಡಿದರು. 

ಇಲ್ಲಿನ ಎಕನಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ಉತ್ತಮ ಆಡಳಿತ ದಿನ’ ಕಾರ್ಯಕ್ರಮದಲ್ಲಿ 60,000 ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ ಫೋನ್‌ಗಳು ಮತ್ತು ಟ್ಯಾಬ್ಲೆಟ್‌ಗಳನ್ನು ವಿತರಿಸಲಾಯಿತು. 

‘ನಿಮ್ಮ ಚಿಂತನೆಗಳು ಚಿಕ್ಕದಾಗಿರಬಾರದು. ನೀವು ದೊಡ್ಡದಾಗಿ ಯೋಚಿಸಿದರೆ ಅದು ನಿಮ್ಮ ವ್ಯಕ್ತಿತ್ವಕ್ಕೆ ಹೊಸ ಆಯಾಮ ನೀಡುತ್ತದೆ. ಜೀವನದಲ್ಲಿ ಹತಾಶಭಾವ ಬರದಂತೆ ನೋಡಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದ ಯೋಗಿ, ತಮ್ಮ ಐದು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ 4.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಿರುವುದಾಗಿ ಹೇಳಿದರು. 

2020 ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಅವರನ್ನು ಸನ್ಮಾನಿಸಲಾಯಿತು. ಮೀರಾ ಅವರಿಗೆ ₹1.5 ಕೋಟಿ ಮತ್ತು ಅವರ ತರಬೇತುದಾರ ವಿಜಯ್ ಕುಮಾರ್‌ ಶರ್ಮಾ ಅವರಿಗೆ ₹ 10 ಲಕ್ಷ ಬಹುಮಾನ ನೀಡಲಾಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು